ಇಡುಕ್ಕಿ (ವಿಶ್ವ ಕನ್ನಡಿಗ ನ್ಯೂಸ್) : ಇಡುಕ್ಕಿ ಪೈನಾವು ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಸ್.ಎಫ್.ಐ. ಕಾರ್ಯಕರ್ತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಕಣ್ಣೂರಿನ ತಳಿಪರಂಬ ಮೂಲದ ಧೀರಜ್ ಕೊಲೆಯಾದವರು. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದಾರೆ. ಕಾಲೇಜು ನಾಯಕನ ಆಯ್ಕೆ ವೇಳೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದು ಹತ್ಯೆಯಲ್ಲಿ ಕೊನೆಗೊಂಡಿದೆ. ಗಾಯಾಳುಗಳನ್ನು ಇಡುಕ್ಕಿ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ.
ಹತ್ಯೆಯಾದ ಧೀರಜ್ ನಿಗೆ ಯುವ ಕಾಂಗ್ರೆಸ್ ಕಾರ್ಯಕರ್ತ ಚಾಕುವಿನಿಂದ ಇರಿದಿದ್ದಾನೆ ಎಂಬುದು ಪ್ರಾಥಮಿಕ ಮಾಹಿತಿ. ಆತ ದಾಳಿ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಕಾಲೇಜು ಆವರಣದ ಹೊರಗೆ ದಾಳಿ ನಡೆದಿದೆ.
ಸೋಮವಾರ ಮಧ್ಯಾಹ್ನದ ಸುಮಾರಿಗೆ ಈ ಘಟನೆ ನಡೆದಿದೆ. ಸೋಮವಾರ ಕಾಲೇಜಿನಲ್ಲಿ ಚುನಾವಣೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿದೆ. ಯುವ ಕಾಂಗ್ರೆಸ್ ಮತ್ತು ಕೆಎಸ್ಯು-ಎಸ್ಎ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಇದೇ ವೇಳೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ.
ವಿದ್ಯಾರ್ಥಿಗಳ ಸಂಘರ್ಷಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಚುನಾವಣಾ ವಿವಾದ ಮಾರಾಮಾರಿಯಲ್ಲಿ ಅಂತ್ಯಗೊಂಡಿದೆ ಎಂದು ವರದಿಯಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.