ಕೋಲಾರ(ವಿಶ್ವಕನ್ನಡಿಗ ನ್ಯೂಸ್): ಬಾಲ್ಯ ವಿವಾಹವು ಹೆಣ್ಣು ಮಕ್ಕಳ ಜೀವನ , ಆರೋಗ್ಯ , ಸಮಾನತೆ ಮತ್ತು ಮುಕ್ತವಾದ ಆಯ್ಕೆಯ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗದ ಉಪನ್ಯಾಸಕ ಶಿವರಾಜ್ಕುಮಾರ್.ಎಂ ರವರು ಮಕ್ಕಳಿಗೆ ಅರಿವು ಮೂಡಿಸಿದರು.
ಬೆಗಿಹೊಸಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗ , ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೋಲಾರ ಮತ್ತು ಸರ್ಕಾರಿ ಪ್ರೌಢಶಾಲೆ ಬೆಗ್ಲಿಹೊಸಹಳ್ಳಿ ರವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಬಾಲ್ಯವಿವಾಹ ಮತ್ತು ಮಕ್ಕಳ ಹಕ್ಕುಗಳ ಕುರಿತಾದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ. ಕಾರ್ಯಕ್ರಮದ ಅಧ್ಯಕತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಮಹದೇವನಾಯ್ಕ .ಬಿ.ಆರ್ ರವರು ವಹಿಸಿಕೊಂಡಿದ್ದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಸಾಂಸ್ಥಿ ರಕ್ಷಣಾಧಿಕಾರಿಗಳಾದ ಶ್ರೀನಾಥ್ , ಮತ್ತು ಕಾನೂನು ಪರಿವೀಕ್ಷಣಾಧಿಕಾರಿಗಳಾದ ನ ೦ ದನ ರವರು ಬಾಲ್ಯವಿವಾಹ ಮತ್ತು ಮಕ್ಕಳ ಹಕ್ಕುಗಳ ಕುರಿತಂತೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲಗಳನ್ನು ಒದಗಿಸಿದಂತಹ ಬೆಗ್ಲಿಹೊಸಹಳ್ಳಿ ಗ್ರಾ.ಪಂ. ಅಧ್ಯಕ್ಷರಾದ ಚರಣ್ ರಾಜ್ .ಕೆ.ಸಿ , ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸುಚಿತ್ .ಪಿ.ಎಂ , ಶಾಲೆಯ ಮುಖ್ಯೋಪಾಧ್ಯಾಯ ರವರುಗಳಿಗೆ ಪ್ರಶಿಕ್ಷಣಾರ್ಥಿಗಳು ಧನ್ಯವಾದಗಳನ್ನು ತಿಳಿಸಿದರು .
ಈ ಸಂದರ್ಭದಲ್ಲಿ ಜಿಲ್ಲಾಮಕ್ಕಳ ರಕ್ಷಣಾ ಘಟಕದ ಶ್ರೀನಾಥ್ , ನಂದನ , ಪವಿತ್ರ , ಬೆಗ್ಲಿಹೊಸಹಳ್ಳಿ ಗ್ರಾಮ ಪಂಚಾಯತಿಯ ಪಿ.ಡಿ.ಓ ಮಧುಮತಿ ಶಾಲೆಯ ಶಿಕ್ಷಕವೃಂದ , ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯ ಸಮಾಜಕಾರ್ಯ ವಿಭಾಗದ ಪ್ರಶಿಕ್ಷಣಾರ್ಥಿಗಳಾದ ವೇಣು .ಎನ್ , ಸುಪ್ರಿಯ .ಕೆ.ವಿ , ಸೌಮ್ಯ .ಸಿ , ನವೀನ್ ಕುಮಾರ್ .ಜೆ ಸೇರಿದಂತೆ ಅಂಗನವಾಡಿ ಕಾರ್ಯಕರ್ತರು , ಆಶಾ ಕಾರ್ಯಕರ್ತರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು .ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.