ಮಂಗಳೂರು (www.vknews.com) : ಸಕಲೇಶಪುರದ ಮಾರನಹಳ್ಳಿಯ ಹಿಲ್ ಟಾಪ್ ಹೋಟೆಲ್ ಗೆ ಸಂಘ ಪರಿವಾರದವರು ಗೋ ಮಾಂಸದ ಸುಳ್ಳು ನೆಪವನ್ನು ಹೇಳಿ ದಾಳಿ ನಡೆಸಿ ಹೋಟೆಲ್ ಮಾಲಿಕನ ಮತ್ತು ಕೆಲಸದವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದು, ಹಲ್ಲೆಗೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಎಸ್ ಡಿಪಿಐ ದ.ಕ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಯವರ ನೇತೃತ್ವದ ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಕಾನೂನು ಹೋರಾಟದ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.
ನಿಯೋಗದಲ್ಲಿ ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ಜಿಲ್ಲಾ ಪ್ರ.ಕಾರ್ಯದರ್ಶಿ ಅನ್ವರ್ ಸಾದಾತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.