ರಾಂಚಿ (ವಿಶ್ವ ಕನ್ನಡಿಗ ನ್ಯೂಸ್) : ಮದ್ಯ ಖರೀದಿಸಲು ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಪತಿ ತನ್ನ ಗರ್ಭಿಣಿ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಜಾರ್ಖಂಡ್ ನಲ್ಲಿ ನಡೆದಿದೆ.
ಕಳೆದ ವರ್ಷ ಮೇ 25ರಂದು ತಿಲೇಶ್ವರ ಗಂಜು ಪ್ರಿಯಾ ದೇವಿಯನ್ನು ಮದುವೆಯಾಗಿದ್ದ. ಕಂಠ ಪೂರ್ತಿ ಕುಡಿದು ಬರುತ್ತಿದ್ದ ತಲೇಶ್ವರ ಪ್ರಿಯಾ ಗರ್ಭಿಣಿ ಎನ್ನುವುದು ಲೆಕ್ಕಿಸದೇ ಹೊಡೆದು ಹಿಂಸೆ ಮಾಡುತ್ತಿದ್ದನು. ಇದೇ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಪ್ರಿಯಾ ಪ್ರಾಣವನ್ನು ತೆಗೆದಿದೆ.
ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.