(www.vknews.com) : ದಿನಾಂಕ: 16-01-2022ನೇ ಭಾನುವಾರದಂದು, ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಮೂಡಬಿದ್ರೆ ಗೃಹರಕ್ಷಕದಳ ಕಛೇರಿಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮೂಡಬಿದ್ರೆ ಘಟಕಕ್ಕೆ ಇನ್ಫೋಸಿಸ್ ವತಿಯಿಂದ ನೀಡಲಾದ ಕಂಪ್ಯೂಟರ್ಅನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಇವರು ಮೂಡಬಿದ್ರೆ ಘಟಕದ ಪ್ರಭಾರ ಘಟಕಾಧಿಕಾರಿಯಾದ ಶ್ರೀ ಪಾಂಡುರಾಜ್ ಇವರಿಗೆ ಹಸ್ತಾಂತರಿಸಿದರು ಹಾಗೂ ಇನ್ನು ಮುಂದಿನ ದಿನಗಳಲ್ಲಿ ವಾರದ ಕವಾಯತಿನ ಹಾಜರಾತಿಗಳನ್ನು ಕಂಪ್ಯೂಟರ್ ಮೂಲಕವೆ ಕಳುಹಿಸುವಂತೆ ಸೂಚಿಸಿದರು ಮತ್ತು ಕಾಗದ ರಹಿತ ಕಛೇರಿ ಆಗಬೇಕೆಂದು ನುಡಿದರು.
ಈ ಸಂದರ್ಭದಲ್ಲಿ ಮೂಡಬಿದ್ರೆ ಘಟಕದ ಗೃಹರಕ್ಷಕ ಗೃಹರಕ್ಷಕಿಯರು ಮತ್ತು ಮಂಗಳೂರು ಘಟಕದ ಗೃಹರಕ್ಷಕರಾದ ದಿವಾಕರ್ ಮುಂತಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.