ಮೈಸೂರು (ವಿಶ್ವ ಕನ್ನಡಿಗ ನ್ಯೂಸ್) : ಸರ್ಕಾರಕ್ಕೆ ಜನರ ಜೀವ ಕಾಪಾಡುವುದು ಎಷ್ಟು ಮುಖ್ಯವೋ, ಅಷ್ಟೇ ಜೀವನವನ್ನು ಕಾಪಾಡುವುದು ಮುಖ್ಯ ಹಾಗಾಗಿ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ನಂತಹ ಕಠಿಣ ನಿಯಮ ಬೇಡ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ಸಿಂಹ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಜನರ ಜೀವನ ದುಸ್ತರವಾಗಿದೆ, ಕೊರೊನಾ ಒಂದನೇ ಮತ್ತು ಎರಡನೇ ಅಲೆಗೆ ಸಿಲುಕಿ ಜನರು ಇನ್ನೂ ಸುಧಾರಿಸಿಕೊಳ್ಳುವ ಹಂತದಲ್ಲಿದ್ದಾರೆ. ಇನ್ನೂ ಕೆಲವು ಕುಟುಂಬ ಬೀದಿಗೆ ಬಿದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಲಾಕ್ಡೌನ್ ಬೇಡ ಬದಲಿಗೆ ಆಸ್ಪತ್ರೆಯಲ್ಲಿ ಸೌಲಭ್ಯ ಹೆಚ್ಚಿಸಿ, ಜೊತೆಗೆ ಸೋಂಕು ಹರಡದಂತೆ ಎಚ್ಚರವಹಿಸಿ ಎಂದು ತಮ್ಮದೇ ಸರಕಾರಕ್ಕೆ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.