ಮೃತಪಟ್ಟವರಲ್ಲಿ ಇಬ್ಬರು ಭಾರತೀಯರು
(ವಿಶ್ವ ಕನ್ನಡಿಗ ನ್ಯೂಸ್) : ಇಂದು ಬೆಳಗ್ಗೆ ಅಬುಧಾಬಿಯ ಮುಸಾಫ್ಹಾದಲ್ಲಿ ಮೂರು ಪೆಟ್ರೋಲಿಯಂ ಟ್ಯಾಂಕರ್ಗಳಲ್ಲಿ ಬೆಂಕಿ ಕಾಣಿಸಿಕೊಂಡು ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ.
ಮೃತಪಟ್ಟವರಲ್ಲಿ ಇಬ್ಬರು ಭಾರತೀಯರು ಮತ್ತು ಒಬ್ಬ ಪಾಕಿಸ್ತಾನಿ ಸೇರಿದ್ದಾರೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ.
ಡ್ರೋನ್ಗಳು ಬೆಂಕಿಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕ ತನಿಖೆಗಳು ಸೂಚಿಸುತ್ತವೆ. ಬೆಂಕಿ ಆರಂಭವಾಗುವ ಮುನ್ನವೇ ಎರಡು ಪ್ರದೇಶಗಳಲ್ಲಿ ಹಾರುವ ವಸ್ತುಗಳು ಬಿದ್ದಿವೆ ಎಂದು ಅಬುಧಾಬಿ ಪೊಲೀಸರು ತಿಳಿಸಿದ್ದಾರೆ. ಬೆಂಕಿಯ ಕಾರಣ ಮತ್ತು ಅದಕ್ಕೆ ಕಾರಣವಾದ ಸಂದರ್ಭಗಳನ್ನು ಕಂಡುಹಿಡಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.