ಕುಂದಾಪುರ ,(ವಿಶ್ವ ಕನ್ನಡಿಗ ನ್ಯೂಸ್ ): ತಾಲೂಕಿನ ಶಂಕರನಾರಾಯಣದಿಂದ ಹೊನ್ನಾಳಿಗೆ ತೆರಳುತ್ತಿದ್ದ ಕಾರೊಂದು ಹುಲಿಕಲ್ ಘಾಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಘಟನೆ ಸಂಭವಿಸಿದೆ.
ಕಾರಿನಲ್ಲಿ ಚಾಲಕ ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದು ಎಲ್ಲರೂ ಸುರಕ್ಷಿತವಾಗಿದ್ದು, ವಿಷಯ ತಿಳಿದು ಕೂಡಲೇ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿದರಾದರೂ ಅಷ್ಟರಲ್ಲಾಗಲೇ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು.
ಈ ಘಟನಾ ಸ್ಥಳವು ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ್ದೂ, ಪ್ರಕರಣ ದಾಖಲು ಗೊಂಡಿದೆ .
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.