ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲಾಧಿಕಾರಿಗಳಾದ ಡಾ. ರಾಜೇಂದ್ರ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜ.17ರ ಸೋಮವಾರ ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್-19 ಸೋಂಕಿನ ಸ್ಥಿತಿ-ಗತಿಗಳ ಬಗ್ಗೆ ಶಿಕ್ಷಣ, ಆರೋಗ್ಯ ಇಲಾಖೆ ಹಾಗೂ ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲಕರು ಹಾಗೂ ಪ್ರತಿನಿಧಿಗಳ ಸಭೆ ನಡೆಯಿತು.
ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನಲೆಯಲ್ಲಿ ಶೈಕ್ಷಣಿಕ ಸಂಸ್ಥೆಗಳ ಆಡಳಿತ ಮಂಡಳಿಗಳು ಹಾಗೂ ಅಲ್ಲಿನ ಮುಖ್ಯಸ್ಥರು ಅತ್ಯಂತ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಪಾತ್ರ ಅತ್ಯಂತ ಜವಬ್ದಾರಿಯುತದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ತಿಳಿಸಿದರು.
ಇಂತಹ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಜಿಲ್ಲಾಡಳಿತದೊಂದಿಗೆ ಎಲ್ಲಾ ಶಿಕ್ಷಣ ಸಂಸ್ಥೆಗಳು ಕೈಜೋಡಿಸಬೇಕು, ಕೆಲವು ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದರೂ, ಪರಿಸ್ಥಿತಿ ಅಷ್ಟು ಗಂಭೀರವಾಗಿಲ್ಲ, ಆದ ಕಾರಣ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವ ಅಥವಾ ಭೌತಿಕ ತರಗತಿಗಳನ್ನು ರದ್ದುಗೊಳಿಸುವ ಅಗತ್ಯವಿಲ್ಲವೆಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾದ ಹಿನ್ನಲೆಯಲ್ಲಿ ಮುಂದಿನ ಒಂದು ವಾರ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.
ಕೈಗೊಳ್ಳಬೇಕಾದ ಕ್ರಮಗಳು ಇಂತಿವೆ:
ಸಭೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಧಾಕರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಸೇರಿದಂತೆ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.