ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣ ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಶಾಲೆಗಳ ಹಾಗೂ ವಿದ್ಯಾರ್ಥಿಗಳ ಕುರಿತು ಉಂಟಾಗುವ ಸಂದೇಹಗಳಿಗೆ ಸಕಾಲದಲ್ಲಿ ಸ್ಪಂದಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದೆ.
ಸಹಾಯವಾಣಿಯು ಪ್ರತಿದಿನ ಕಚೇರಿ ಸಮಯದಲ್ಲಿ ಬೆಳಿಗ್ಗೆ 10.30 ರಿಂದ ಸಂಜೆ 5.30 ಗಂಟೆಯವರೆಗೆ (ಸರ್ಕಾರಿ ರಜಾ ದಿನಗಳನ್ನು ಹೊರತು ಪಡಿಸಿ) ಸಾರ್ವಜನಿಕರು ಶಿಕ್ಷಣ ಸಂಸ್ಥೆ, ವಿದ್ಯಾರ್ಥಿಗಳ ಕುರಿತು, ಸಲಹೆ ಸೂಚನೆ ಹಾಗೂ ಮಾಹಿತಿ ನೀಡಲು ಅಥವಾ ಪಡೆಯಲು ಈ ಉಚಿತ ಸಹಾಯವಾಣಿ (ಟೋಲ್ ಫ್ರೀ) 180042511017 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.