ಕೋಲಾರ (ವಿಶ್ವ ಕನ್ನಡಿಗ ನ್ಯೂಸ್): ಜಿಲ್ಲೆಯಲ್ಲಿ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು , ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸದೆ ಇರುವುದು ದುರದೃಷ್ಟ ಸಂಗತಿ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಕೋಲಾರ ಜಿಲ್ಲೆಯ ಬಗ್ಗೆ ಕಾಳಜಿಯಿಲ್ಲ ಎಂದು ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕುರ್ಕಿ ರಾಜರಾಜೇಶ್ವರಿ ಆರೋಪಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು , ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜಿಲ್ಲೆಗೆ ಧ್ವಜಾರೋಹಣಕ್ಕೆ ಸಿಮೀತವಾಗಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತಿದೆ.
ಕೊರೋನ ನಿಯಂತಣಕ್ಕೆ ನೇಮಕಗೊಂಡಿರುವ ಸಚಿವ ಮುನಿರತ್ನ ಮೂರನೆ ಆಶೆ ಆರಂಭವಾದಾಗಿನಿಂದ ಇತ್ತ ತಲೆ ಹಾಕದೆ ಇರುವುದು ಜಿಲ್ಲೆಯನ್ನು ಕಡೆಗಣಿಸಿರುವುದು ಸ್ಪಷ್ಟವಾಗಿ ಕಾಣುತ್ತಿದೆ ಎಂದರು.
ಕಳೆದ ಕೆಲ ತಿಂಗಳುಗಳ ಹಿಂದೆ ಸುರಿದ ಮಳೆಯಿಂದಾಗಿ ತೋಟಗಾರಿಕೆ , ಕೃಷಿ ಬೆಳೆಗಳು ಸುಮಾರು ಹೆಕ್ಟೇರ್ಗಳಷ್ಟು ನಾಶವಾಗಿದೆ. ಮುನಿರತ್ನ ಅವರು ತೋಟಗಾರಿಕೆ ಸಚಿವರಾಗಿದ್ದರಿಂದ ಜಿಲ್ಲೆಯ ರೈತರ ಸಮಸ್ಯೆಗಳು ಬೆಗೆಹರಿಯುತ್ತವೆ ಎಂಬ ನಿರೀಕ್ಷೆಯಿತ್ತು. ಆದರೆ ಬೆಳೆ ಹಾನಿ ವೀಕ್ಷಣೆಗೆ ರಾಜ್ಯದ ಮುಖ್ಯಮಂತಿಗಳು ಜಿಲ್ಲೆಗೆ ಆಗಮಿಸಿದಾಗ ಮುನಿರತ್ನ ಆಗಮಿಸಿದ್ದರು. ಆದರೆ ಇದುವರೆಗೂ ತೋಟಗಾರಿಕೆ ಅಧಿಕಾರಿಗಳ ಸಭೆಯನ್ನು ಕರೆದಿಲ್ಲ ಎಂದರೆ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತಿದ್ದಾರೆ ಎಂಬುದು ಅರ್ಥವಾಗುತ್ತದೆ ಎಂದು ದೂರಿದರು.
ಉಸ್ತುವಾರಿ ಸಚಿವರಾಗಿ ಮುನಿರತ್ನ ನೇಮಕಗೊಂಡ ಮೇಲೆ ಕೊರೋನ ನಿಯಂತ್ರಣ ಸಂಬಂಧ ಹಮ್ಮಿಕೊಂಡಿದ್ದ ಸಭೆಗಳನ್ನು ಹೊರತು ಪಡಿಸಿದರೆ ಪ್ರಗತಿ ಪರಿಶೀಲನಾ ಸಭೆ ನಡೆಸಿಲ್ಲ. ಮುಂದಿನ ತಿಂಗಳು ರಾಷ್ಟ್ರೀಯ ಮತ್ತು ರಾಜ್ಯ ಬಜೆಟ್ ಅಧಿವೇಶನ ನಡೆಯಲಿದೆ. ಆದರೆ ಜಿಲ್ಲೆಯಲ್ಲಿ ಇದುವರೆಗೂ ಅಭಿವೃದ್ಧಿ ಕೆಲಸಗಳಿಗೆ ಅಗತ್ಯವಾಗಿ ಬೇಕಾಗಿರುವ ಕ್ರಿಯಾ ಯೋಜನೆ ಸಂಬಂಧ ಸಭೆ ಕರೆದಿಲ್ಲ.
ಸರ್ಕಾರಕ್ಕೆ ಜಿಲ್ಲೆಯ ಮೇಲೆ ಕಾಳಜಿಯಿದ್ದರೆ ಅಧಿಕೃತ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಿ ಎಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಪಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿಯನ್ನು ಸರ್ಕಾರ ವರ್ಗಾವಣೆ ಮಾಡಿ ನಾಲೈದು ದಿನಗಳು ಕಳೆದರು ಖಾಲಿಯಾಗಿರುವ ಹುದ್ದೆಗೆ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡುವ ಪಯತ್ನ ಸಹ ಸರ್ಕಾರ ಮಾಡಿಲ್ಲ. ಇನ್ನು ಉಲ್ಬಣಗೊಳ್ಳುತ್ತಿರುವ ಕೊರೋನ ಸೋಂಕನ್ನು ನಿಯಂತಣ ಮಾಡಲು ಹೇಗೆ ಸಾಧ್ಯ . ಜನ ಸಾಮಾನ್ಯರನ್ನು ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ಸಚಿವ ಸಂಪುಟದ ಸಚಿವರೇ ನೀಡುತ್ತಿದ್ದಾರೆ.
ಕೊರೋನ ನಿಯಂತಣ ವಿಚಾರದಲ್ಲಿ ಸರ್ಕಾರಕ್ಕೆ ಬದ್ಧ ನಿಲುವು ಇಲ್ಲವಾಗಿದೆ ಎಂದು ಟೀಕಿಸಿದರು . ಮೂರನೆ ಅಲೆಯು ಹೆಚ್ಚಾಗಿ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ ತಜ್ಞರು ಅಭಿಪ್ರಾಯ ತಿಳಿಸಿದ್ದಾರೆ .
ಸರ್ಕಾರ ಕೆಲ ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಮಕ್ಕಳನ್ನು ಕೊರೋನ ಮುಕ್ತರನ್ನಾಗಿಸಲು ಕ್ರಮಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.