ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ಪ್ರಸಕ್ತ ದಿನದಿಂದ ದಿನಕ್ಕೆ ಕೋವಿಡ್-19 ಸೋಂಕು ಪ್ರಕರಣಗಳು ಏರಿಕೆಯಾಗುತ್ತಿವೆ. ಮುಂಬರುವ ದಿನಗಳಲ್ಲಿ ಹಲಾವಾರು ಧಾರ್ಮಿಕ ಆಚರಣೆಗಳು ಹಾಗೂ ಇತರ ಕಾರ್ಯಕ್ರಮಗಳು ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ಸಾಧ್ಯತೆ ಇರಲಿದ್ದು, ಕೋವಿಡ್ ಹಾಗೂ ಅದರ ರೂಪಾಂತರಿ ಓಮಿಕ್ರಾನ್ ಪ್ರಸರಣವನ್ನು ನಿಯಂತ್ರಿಸಲು ಈಗಾಗಲೇ ಹೊರಡಿಸಲಾದ ಹೆಚ್ಚುವರಿ ನಿಯಂತ್ರಣ ಕ್ರಮಗಳೊಂದಿಗೆ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಜಿಲ್ಲಾಡಳಿತದಿಂದ ಜಾರಿಗೊಳಿಸಲಾಗಿದೆ.
ಅವುಗಳಿವು:ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿ ಈಗಾಗಲೇ ಹೊರಡಿಸಲಾದ ಕೋವಿಡ್ ಸೋಂಕು ನಿಯಂತ್ರಣ ಕ್ರಮಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಗಳು ಪರಿಣಾಮಕಾರಿಯಾಗಿ ಪಾಲನೆಯಾಗುತ್ತಿರುವ ಬಗ್ಗೆ ಸಂಬಂಧಪಟ್ಟ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೂಕ್ತ ಕ್ರಮ ವಹಿಸುವುದು.
ಯಾವುದೇ ವ್ಯಕ್ತಿ, ಜನರ ಗುಂಪು, ಸಮುದಾಯ, ಸಂಘ / ಸಂಸ್ಥೆ, ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್, ಇತ್ಯಾದಿಗಳಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವುದು ಮತ್ತು ಕೋವಿಡ ಸಮುಚಿತ ವರ್ತನಗಳನ್ನು ಅನುಸರಿಸದಿರುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51 ರಿಂದ 60 ರನ್ವಯ, ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತ ಮತ್ತು ಐಪಿಸಿ ಕಲಂ 188 ರಡಿ ಹಾಗೂ ಇತರ ಕಾನೂನು ನಿಬಂಧನೆಗಳನ್ವಯ ಕ್ರಮ ಕೈಗೊಳ್ಳಬೇಕು.
ತಮ್ಮ ವ್ಯಾಪ್ತಿಗೊಳಪಡುವ ಪ್ರದೇಶಗಳಲ್ಲಿ ಈ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ಅನುಷ್ಠಾನ ಮಾಡಲು ವಿಫಲರಾಗುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ, ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.