ಕೋಲಾರ (ವಿಶ್ವ ಕನ್ನಡಿಗ ನ್ಯೂಸ್) : ಉಡುಪಿಯಲ್ಲಿ ಹಿಜಾಬ್ ವಿವಾದದ ಬೆನ್ನಲ್ಲೇ ಕೋಲಾರ ಜಿಲ್ಲೆಯ ಮುಳಬಾಗಲು ನಗರದ ಸೋಮೇಶ್ವರ ಪಾಳ್ಯದ ಬಳೆಚಂಗಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮಾಜ್ ಗೆ ಅವಕಾಶ ಕಲ್ಪಿಸಿದ್ದಕ್ಕೆ ಹಿಂದೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಸರ್ಕಾರಿ ಶಾಲೆಯಲ್ಲಿ ಮುಸ್ಲಿಂ ಮಕ್ಕಳಿಗೆ ನಮಾಜ್ ಮಾಡಲು ಶಾಲೆಯ ಮುಖ್ಯ ಶಿಕ್ಷಕರು ಅವಕಾಶ ಕಲ್ಪಿಸಿ ಕೊಟ್ಟಿದ್ದರು, ಇದನ್ನು ವಿರೋಧಿಸಿ ಹಿಂದೂ ಸಂಘಟನೆಗಳ ಕಾರ್ಯಕರತರು ಶಾಲೆಗೆ ತೆರಳಿ ವಿವಾದ ಸೃಷ್ಟಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ತಹಸೀಲ್ದಾರ್ ಶೋಭಿತಾ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದ್ದರು. ಬಿಇಒ ಸೂಚನೆ ಮೇರೆಗೆ ಶಾಲೆಗೆ ಭೇಟಿ ನೀಡಿದ ಶಿಕ್ಷಣ ಸಂಯೋಜಕ ಅಂಜಿತ್ ಕುಮಾರ್ ನೇತೃತ್ವದ ತಂಡವು ಶಾಲೆಯ ಮುಖ್ಯ ಶಿಕ್ಷರು, ಸಹ ಶಿಕ್ಷರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದಿದ್ದು, ಬಿಇಒ ಅವರಿಗೆ ವರದಿ ನೀಡುವುದಾಗಿ ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.