(ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ, ತನ್ನ ರಾಜಕೀಯ ಅನುಕೂಲಕ್ಕಾಗಿ ಹಿಂದುತ್ವವನ್ನು ಬಳಸುತ್ತಿದೆ, ಅಕಾಲಿದಳ ಮತ್ತು ಶಿವಸೇನೆಯಂತಹ ಹಳೆಯ ಘಟಕಗಳು ಈಗಾಗಲೇ ಮೈತ್ರಿಕೂಟದಿಂದ ಹೊರನಡೆದಿರುವುದರಿಂದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ)ದ ಶಕ್ತಿ ಕುಗ್ಗಿದೆ ಎಂದು ಶಿವಸೇನೆ ಅಧ್ಯಕ್ಷ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಪಕ್ಷದ ಸಂಸ್ಥಾಪಕ ಮತ್ತು ಅವರ ತಂದೆ ಬಾಳ್ ಠಾಕ್ರೆ ಅವರ 96ನೇ ಜನ್ಮ ದಿನದ ಅಂಗವಾಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದುತ್ವಕ್ಕೆ ಅಧಿಕಾರ ಬೇಕು ಎಂಬ ಕಾರಣಕ್ಕೆ ಶಿವಸೇನೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಸೇನೆ ಎಂದಿಗೂ ಅಧಿಕಾರಕ್ಕಾಗಿ ಹಿಂದುತ್ವವನ್ನು ಬಳಸಿಕೊಂಡಿಲ್ಲ. ಶಿವಸೇನೆ ಬಿಜೆಪಿಯನ್ನು ಬಿಟ್ಟಿದೆಯೇ ಹೊರತು ಹಿಂದುತ್ವವನ್ನಲ್ಲ. ಶಿವಸೇನೆಯು ಕಳೆದ 25 ವರ್ಷಗಳಿಂದ ಬಿಜೆಪಿಯೊಂದಿಗಿನ ಮೈತ್ರಿ ವ್ಯರ್ಥವಾಯಿತು. ಬಿಜೆಪಿಯು ಅವಕಾಶವಾದಿ ಹಿಂದುತ್ವ ಮಾಡುತ್ತಿದೆ ಎಂದು ಬಿಜೆಪಿ ಪಕ್ಷವನ್ನು ಟೀಕಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.