ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದನ್ನು ನಿಯಂತ್ರಿಸಲು, ಪರೀಕ್ಷೆ-ಪತ್ತೆ-ಚಿಕಿತ್ಸೆ-ಲಸಿಕಾಕರಣ ಮತ್ತು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಐದು ತಂತ್ರಗಳ ಮೇಲೆ ನಿರಂತರ ಗಮನಹರಿಸುವ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಇದೇ ಜ.31ರ ಬೆಳಿಗ್ಗೆ ಗಂಟೆ 5 ವರೆಗೆ ಕೋವಿಡ್-19 ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಿ ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.
ಜಿಲ್ಲೆಯಾದ್ಯಂತ ಈಗಾಗಲೇ ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ವಾರಾಂತ್ಯದ ಕಪ್ರ್ಯೂ ಹಿಂಪಡೆಯಲಾಗಿದೆ. ಅದಾಗ್ಯೂ, ಎಲ್ಲಾ ದಿನಗಳಲ್ಲಿ ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕಪ್ರ್ಯೂ ಜಾರಿಯಲ್ಲಿರುತ್ತದೆ.
ಉಳಿದಂತೆ ಇತರೆ ಎಲ್ಲಾ ನಿಬರ್ಂಧಗಳು ಯಥಾವತ್ತಾಗಿ ಮುಂದುವರೆಯುತ್ತದೆ. ಎಲ್ಲಾ ರ್ಯಾಲಿಗಳು, ಧರಣಿಗಳು, ಸಭೆಗಳು, ಸಮುದಾಯ, ಕಾರ್ಮಿಕ ಆಚರಣೆಗಳು, ರಾಜಕೀಯ ಪ್ರತಿಭಟನೆಗಳು, ಯಾವುದೇ ರೀತಿಯ ಮೆರವಣಿಗೆಗಳಾಗದಂತಹ ಸಾಮಾಜಿಕ, ಧಾರ್ಮಿಕ, ರಾಜಕೀಯ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ ಎಂದು ಪುನರುಚ್ಚರಿಸಲಾಗಿದೆ.
ರಾಜ್ಯ ಸರ್ಕಾರದ ಚಾಲ್ತಿಯಲ್ಲಿರುವ ಮಾರ್ಗಸೂಚಿಯಂತೆ ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಹೊರಾಂಗಣ ಪ್ರದೇಶಗಳಲ್ಲಿ 200 ಜನರು ಮತ್ತು ಒಳಾಂಗಣ ಪ್ರದೇಶಗಳಲ್ಲಿ 100 ಜನರಿಗೆ ಮಿತಿಗೊಳಿಸಿ ಮದುವೆಯನ್ನು ನಡೆಸಲು ಅನುಮತಿ ನೀಡಲಾಗಿದೆ.
ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು 2 ಡೋಸ್ಗಳ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮಥ್ರ್ಯವನ್ನು ಶೇ.50 ಕ್ಕೆ ಮಿತಿಗೊಳಿಸಿ ಪಬ್ಗಳು/ ಕ್ಲಬ್ಗಳು ರೆಸ್ಟೋರೆಂಟ್ಗಳು, ಬಾರ್ಗಳು, ಹೋಟೆಲ್ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿಗೆ ಅನುಮತಿಸಲಾಗಿದೆ.
ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮಥ್ರ್ಯವನ್ನು ಶೇ.50 ಕ್ಕೆ ಮಿತಿಗೊಳಿಸಿ ಎಲ್ಲಾ ಸಿನೆಮಾ ಹಾಲ್ಗಳು, ಮಲ್ಟಿಪ್ಲೆಕ್ಸ್ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಆಡಿಟೋರಿಯಮ್ಗಳು ಮತ್ತು ಇತರ ಸಭಾಂಗಣಗಳು ಕಾರ್ಯನಿರ್ವಹಿಸಬೇಕು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸರ್ಕಾರ ಹೊರಡಿಸಿದ ಚಾಲ್ತಿಯಲ್ಲಿರುವ ಸುತ್ತೋಲೆ /ಮಾರ್ಗ ಸೂಚಿಗಳನ್ವಯ ಕೇರಳ ರಾಜ್ಯದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶ ಕಲ್ಪಿಸುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್ ಪೆÇೀಸ್ಟ್ ಗಳಲ್ಲಿ ತೀವ್ರ ಕಣ್ಗಾವಲು ಮತ್ತು ತಪಾಸಣೆಯನ್ನ ನಡೆಸಬೇಕು.
ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಸೂಚನೆ: ಸಂಬಂಧಪಟ್ಟ ಅಧಿಕಾರಿಗಳು ವಿಪತ್ತು ನಿರ್ವಹಣಾ ಕಾಯ್ದೆ-2005 ರಡಿ ಈಗಾಗಲೇ ಹೊರಡಿಸಲಾದ ಕೋವಿಡ್-19 ನಿಯಂತ್ರಣ ಕ್ರಮಗಳೊಂದಿಗೆ ಕೋವಿಡ್ ಸಮುಚಿತ ವರ್ತನೆಗಳು ಪರಿಣಾಮಕಾರಿಯಾಗಿ ಪಾಲನೆಯಾಗುತ್ತಿರುವ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ವಹಿಸಬೇಕು.
ಯಾವುದೇ ವ್ಯಕ್ತಿ, ಜನರ ಗುಂಪು, ಸಮುದಾಯ, ಸಂಘ / ಸಂಸ್ಥೆ, ರೆಸಿಡೆಂಟ್ ವೆಲ್ಫೇರ್ ಅಸೋಸಿಯೇಷನ್ ಇತ್ಯಾದಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವುದು ಮತ್ತು ಕೋವಿಡ್ ಸಮುಚಿತ ವರ್ತನೆಗಳನ್ನು ಅನುಸರಿಸದಿರುವವರ ವಿರುದ್ಧ ಎಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020ರ ಕಲಂ 4, 5 ಮತ್ತು 10 ರಂತೆ ಹಾಗೂ ಇತರ ಕಾನೂನು ನಿಬಂಧನೆಗಳನ್ವಯ ಕ್ರಮ ಕೈಗೊಳ್ಳಲಾಗುವುದು.
ಈ ನಿಯಂತ್ರಣ ಕ್ರಮಗಳನ್ನು ಉಲ್ಲಂಘಿಸುವವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಾಗೂ ಸರ್ಕಾರಿ ಮಾರ್ಗಸೂಚಿಗಳನ್ನು ಅನುμÁ್ಠನಿಸಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ(3) ದಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಆದೇಶ ಹೊರಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.