ಮೈಸೂರು (www.vknews.com) : ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದೆ. ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್ ವಿವಾದ ಪ್ರತಿಧ್ವನಿಸುತ್ತಿದ್ದು, ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ ನಿಯಮಕ್ಕೆ ಸೆಡ್ಡು ಹೊಡೆದಿದ್ದಾರೆ.
ವಿದ್ಯಾರ್ಥಿನಿಯರು ಮೈಸೂರಿನ ಬನ್ನಿಮಂಟಪದ ಹೈವೆ ಸರ್ಕಲ್ ಬಳಿ ಹಿಜಾಬ್ ಅಭಿಯಾನ ನಡೆಸುತ್ತಿದ್ದು, ಐ ಲವ್ ಹಿಜಾಬ್ ಎಂಬ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿ, ಪರಸ್ಪರ ಹಿಜಾಬ್ ತೊಡಿಸಿ ಪ್ರತಿಭಟಿಸಿದ್ದಾರೆ. ಅಲ್ಲದೇ ಎಲ್ಲಾ ಕಾಲೇಜಿನಲ್ಲೂ ಹಿಜಾಬ್ಗೆ ಅವಕಾಶ ಕಲ್ಪಿಸುವಂತೆ ವಿದ್ಯಾರ್ಥಿನಿಯರು ಮನವಿ ಮಾಡಿಕೊಂಡರು. ಈ ಮೂಲಕ ಉಡುಪಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಬೆಂಬಲ ವ್ಯಕ್ತಪಡಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.