ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರುತ್ತಿದ್ದು, ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಅಂತ ಹಿಂದೂ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ.
ಅದೇ ರೀತಿ ಹಿಜಾಬ್ ಪರವಾಗಿ ಕೋರ್ಟ್ ತೀರ್ಪು ನೀಡಿದರೆ ನಮ್ಮ ಹೋರಾಟ ಮುಂದುವರಿಯುತ್ತದೆ ಅಂತ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮೂರು ದಿನಗಳ ಕಾಲ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಿದೆ.
ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ, ರಾಜ್ಯದ ಕಾಲೇಜುಗಳಲ್ಲಿ ಸಮವಸ್ತ್ರ ವಿವಾದ ಹಿನ್ನೆಲೆಯಲ್ಲಿ ನಾಳೆಯಿಂದ ಮುಂದಿನ ಮೂರು ದಿನಗಳ ಕಾಲ ರಾಜ್ಯಾದ್ಯಂತ ಎಲ್ಲಾ ಹೈಸ್ಕೂಲ್, ಪಿಯು ಕಾಲೇಜು, ಡಿಗ್ರಿ ಕಾಲೇಜು ಮತ್ತು ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.