ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹಿಜಾಬ್ ವಿವಾದದ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ವಿಸ್ತೃತ ಪೀಠ ಅರ್ಜಿಯ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿದ್ದಾರೆ.
ಹಿಜಾಬ್ ವಿವಾದದಿಂದ ಶಿಕ್ಷಣವನ್ನು ಸ್ಥಗಿತ ಮಾಡುವುದು ಸರಿಯಲ್ಲ, ಶಾಲೆಗಳನ್ನು ಶೀಘ್ರಗತಿಯಲ್ಲಿ ಆರಂಭಿಸಿ. ವಿವಾದ ಕಾರಣದಿಂದ ಮಕ್ಕಳನ್ನು ಶಿಕ್ಷಣದಿಂದ ದೂರ ಇಡುವುದು ಸರಿಯಲ್ಲ, ಕೆಲವೇ ದಿನಗಳಲ್ಲಿ ತೀರ್ಪು ನೀಡಲಾಗುವುದು ಎಂದು ಹೇಳಿದ ನ್ಯಾಯಾಲಯ, ಸೋಮವಾರ ಶಾಲಾ, ಕಾಲೇಜುಗಳನ್ನು ಆರಂಭಿಸಬಹುದು. ತೀರ್ಪು ಬರುವವರೆಗೆ ಕೇಸರಿ ಶಾಲು, ಹಿಜಾಬ್ ಧರಿಸಿ ಶಾಲೆಗೆ ಹೋಗುವಂತಿಲ್ಲ ಎಂದು ಮಧ್ಯಂತರ ತೀರ್ಪು ನೀಡಿದೆ..
ಹಿಜಾಬ್ ವಿವಾದ ಸಂಬಂಧ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾ.ಖಾಜಿ ಜೈಬುನ್ನೀಸಾ, ನ್ಯಾ.ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.