(www.vknews.in) : ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಸ್ಥಾಪಕರ ದಿನಾಚರಣೆಯು ಸೋಮವಾರ, ಫೆಬ್ರವರಿ 14 ರಂದು ಪಾಂಡೇಶ್ವರದ ಶ್ರೀನಿವಾಸ್ ಕಾಲೇಜಿನ ಅವರಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗಲಿದೆ. ನವ ಮಂಗಳೂರು ಬಂದರಿನ ಅಧ್ಯಕ್ಷರಾದ ಡಾ. ವೆಂಕಟ ರಮಣ ಅಕ್ಕರಾಜು ರವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ, ಹಾಗೂ ಸಂಸ್ಥಾಪಕರ ದಿನಾಚರಣೆಯ ಕುರಿತು ಉಪನ್ಯಾಸವನ್ನು ನೀಡಲಿದ್ದಾರೆ. ಎ ಶಾಮ ರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಸಹ ಕುಲಾಧಿಪತಿಗಳಾದ ಡಾ. ಎ ಶ್ರೀನಿವಾಸ್ ರಾವ್, ಶ್ರೀನಿವಾಸ್ ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ ಎ ವಿಜಯಲಕ್ಷ್ಮಿ ಆರ್ ರಾವ್, ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಪ್ರೊ. ಶ್ರೀಮತಿ ಎ ಮಿತ್ರಾ ಎಸ್ ರಾವ್, ವಿಶ್ವವಿದ್ಯಾಲಯದ ವಿಶ್ವಸ್ತ ಮಂಡಳಿಯ ಸದಸ್ಯರಾದ ಶ್ರೀಮತಿ ಪದ್ಮಿನಿ ಕುಮಾರ್, ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ ಎಸ್ ಐತಾಳ್, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಅನಿಲ್ ಕುಮಾರ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ್ ಮಯ್ಯ, ಅಭಿವೃದ್ಧಿ ವಿಭಾಗದ ಕುಲಸಚಿವರಾದ ಡಾ. ಅಜಯ್ ಕುಮಾರ್, ಶೈಕ್ಷಣಿಕ ವಿಭಾಗದ ಕುಲಸಚಿವರಾದ ಶ್ರೀ ಆದಿತ್ಯ ಕುಮಾರ್ ಮಯ್ಯ, ಕುಮಾರಿ ಮೇಘನಾ, ಕುಮಾರಿ ಸಮನ ಮತ್ತು ಮಾಸ್ಟರ್ ಇಶಾನ್ ರವರು ವೇದಿಕೆಯಲ್ಲಿ ಉಪಸ್ಥಿತಲಿರಲಿದ್ದಾರೆ.
ನಿವೃತ್ತ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಂಸ್ಥಾಪಕರಾದ ಅಡ್ಕ ಶಾಮ ರಾವ್ ರವರ ಸುಪುತ್ರರು, ಹೆಸರಾಂತ ಲೆಕ್ಕ ಪರಿಶೋಧಕರಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು 1988 ರಲ್ಲಿ ಏಳು ವಿದ್ಯಾರ್ಥಿಗಳಿಂದ ಪ್ರಾರಂಭಿಸಿದ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳು ಇಂದು ಹೆಮ್ಮರವಾಗಿ ಬೆಳೆದಿವೆ. ಸುಮಾರು ಹನ್ನೆರಡು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಶೈಕ್ಷಣಿಕ ಅಭ್ಯಾಸವನ್ನು ಮಾಡುತ್ತಿದ್ದಾರೆ. ನಾಲ್ಕು ಸಾವಿರ ಸಿಬಂದಿಗಳು ವಿಶ್ವವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೋಟೆಲ್ ಮ್ಯಾನೇಜ್ಮೆಂಟ್, ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್, ಅರೆ ವೈದ್ಯಕೀಯ, ಫಿಸಿಯೋಥೆರಪಿ, ನರ್ಸಿಂಗ್, ಮ್ಯಾನೇಜ್ಮೆಂಟ್, ಫಾರ್ಮಸಿ, ಬಿಎಡ್, ಅಲೈಡ್ ಹೆಲ್ತ್ ಸೈನ್ಸಸ್, ವೈಮಾನಿಕ, ಸಂಸ್ಕೃತ, ಯೋಗ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಇವೇ ಮೊದಲಾದ ಕ್ಷೇತ್ರಗಳಲ್ಲಿ ಶ್ರೀನಿವಾಸ್ ಸಮೂಹ ಶೈಕ್ಷಣಿಕ ಸಂಸ್ಥೆಗಳು ಉತ್ತಮ ಸಾಧನೆಯನ್ನು ಮಾಡಿವೆ.
ಮಂಗಳೂರಿನ ಎ. ಶಾಮ ರಾವ್ ಪ್ರತಿಷ್ಠಾನವು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿಭಾಗ ಹಾಗೂ ಪದವಿಪೂರ್ವ ವಿಭಾಗಗಳಲ್ಲಿ ಅತ್ಯುತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಪ್ರತಿಷ್ಠಿತ ಎ. ಶಾಮ ರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡುತ್ತಿದ್ದು, 2021 – 22 ಸಾಲಿನ ಈ ಪ್ರಶಸ್ತಿಗೆ ಬಂಟ್ವಾಳ ತಾಲೂಕಿನ ದಡ್ಡಲ್ ಕಾಡು ಸರಕಾರಿ ಆಂಗ್ಲ ಮಾಧ್ಯಮ ಶಾಲೆಯ ಹಿಂದಿ ಭಾಷಾ ವಿಭಾಗದ ಶಿಕ್ಷಕರಾದ ಶ್ರೀ ರಮಾನಂದ ಹಾಗೂ ಕುಂದಾಪುರದ ಭಂಡಾರ್ಕಾರ್ಸ್ ಪದವಿಪೂರ್ವ ಕಾಲೇಜಿನ ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ಡಾ. ಸರೋಜಾ ಎಂ ರವರು ಆಯ್ಕೆಯಾಗಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೈಕ್ಷಣಿಕ, ಸಾಂಸ್ಕ್ರತಿಕ, ಅರೋಗ್ಯ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಯನ್ನು ತರುವಲ್ಲಿ ಯಶಸ್ವಿಯಾದ ಸಾಧಕರಾದ, ಮಂಗಳೂರಿನ ಜಿ.ಆರ್ ಎಜುಕೇಷನಲ್ ಟ್ರಸ್ಟಿನ ಅಧ್ಯಕರಾದ ಶ್ರೀ ಎಸ್ ಗಣೇಶ್ ರಾವ್ ರವರನ್ನು 2022 ರ ಎ ಶಾಮ ರಾವ್ ಸ್ಮಾರಕ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸಾಮಾಜಿಕ ಸೇವೆಯಲ್ಲಿ ಗಮನಾರ್ಹ ಸೇವೆಯನ್ನು ಸಲ್ಲಿಸಿದ ಕುಳಾಯಿಯ ಕಾವೇರಿ ಆಂಬುಲೆನ್ಸ್ ಮಹಿಳಾ ಚಾಲಕರಾದ ಸಿ ಎಸ್ ರಾಧಿಕಾ ಹಾಗೂ ತನ್ನ ಸ್ಥೈರ್ಯ ಮತ್ತು ಸಾಹಸದಿಂದ ಉತ್ತಮ ಸೇವೆಯನ್ನು ಸಲ್ಲಿಸುತ್ತಿರುವ ಮಂಗಳೂರು ಪೊಲೀಸ್ ವಿಭಾಗದ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಶ್ರೀ ವರುಣ್ ಆಳ್ವ ರವರು ಎ ಶಾಮ ರಾವ್ ಸ್ಮಾರಕ ಸಾಮಾಜಿಕ ಸೇವಾ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸಂಶೋಧನಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಂಶೋಧಕರಾದ ಡಾ. ಸಂಧ್ಯಾ ಶೆಣೈ ಹಾಗೂ ಅಂತರರಾಷ್ಟ್ರೀಯ ಮಟ್ಟದ ಚಿತ್ರಕಲಾ ವಿಭಾಗದಲ್ಲಿ ಉತ್ತಮ ಸಾಧನೆಯನ್ನು ತೋರಿದ, ಶ್ರೀನಿವಾಸ್ ವಿಶ್ವವಿದ್ಯಾಲಯದ ಹೆಮ್ಮೆಯ ವಿದ್ಯಾರ್ಥಿ, ಶ್ರೀ ಚಾರ್ಲ್ಸ್ ಕೆ ಸಿ ಯವರು ಕೂಡಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಈ ಎಲ್ಲಾ ಏಳು ಸಾಧಕರನ್ನು ಸಂಸ್ಥಾಪಕರ ದಿನಾಚರಣೆಯಂದು ಗೌರವಿಸಿ, ಪ್ರಶಸ್ತಿ ಪ್ರಧಾನ ಮಾಡಲಾಗುವುದು, ಹಾಗೂ ಹನ್ನೆರಡು ಪಿ.ಹೆಚ್.ಡಿ. ಪದವೀಧರರನ್ನು ಮತ್ತು ಚಿನ್ನದ ಪದಕ ಪಡೆದ ಎಂಟು ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದು ಎ ಶಾಮ ರಾವ್ ಪ್ರತಿಷ್ಠಾನದ ಅಧ್ಯಕ್ಷರು ಹಾಗೂ ಶ್ರೀನಿವಾಸ್ ವಿಶ್ವವಿದ್ಯಾಲಯದ ಸನ್ಮಾನ್ಯ ಕುಲಾಧಿಪತಿಗಳಾದ ಡಾ. ಸಿಎ ಎ ರಾಘವೇಂದ್ರ ರಾವ್ ರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶ್ರೀನಿವಾಸ್ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಡಾ. ಪಿ ಎಸ್ ಐತಾಳ್, ಕುಲಸಚಿವರಾದ ಡಾ. ಅನಿಲ್ ಕುಮಾರ್, ಪರೀಕ್ಷಾಂಗ ವಿಭಾಗದ ಕುಲಸಚಿವರಾದ ಡಾ. ಶ್ರೀನಿವಾಸ್ ಮಯ್ಯ, ಮತ್ತು ಅಭಿವೃದ್ಧಿ ವಿಭಾಗದ ಕುಲಸಚಿವರಾದ ಡಾ. ಅಜಯ್ ಕುಮಾರ್ ರವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.