ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಹಿಜಾಬ್ ಕುರಿತು ನಿನ್ನೆ ಮುಸ್ಲಿಂ ಹೆಣ್ಣುಮಕ್ಕಳ ಬ್ಯೂಟಿ ಕಾಣಬಾರದು, ಅವರ ಸೇಫ್ಟಿಗೆ ಒಳ್ಳೆಯದು ಎಂದು ಹೇಳಿದ್ದೇನೆಯೇ ಹೊರತು ಬೇರೆ ಯಾವ ಉದ್ದೇಶದಿಂದ ಹೇಳಿಲ್ಲ. ಹಿಜಾಬ್ ಹಾಕುವುದು ಕಡ್ಡಾಯವೇನಲ್ಲ, ಅದು ಅವರವರ ಇಚ್ಛೆ, ಹಾಕಿಕೊಂಡರೆ ಒಳ್ಳೆಯದು ಎಂದು ನಾನು ಹೇಳಿದ್ದೇನೆ ಎಂದು ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.
ಹಿಜಾಬ್ ಧರಿಸದೇ ಇರುವುದರಿಂದಲೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ ಎಂದು ನಿನ್ನೆ ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು, ಇದಕ್ಕೆ ಪ್ರತಿಕ್ರಿಯಿಸಿದ ಅವರು ಹಿಜಾಬ್ ಹಾಕಿಕೊಳ್ಳುವುದು ಹೆಣ್ಣುಮಕ್ಕಳಿಗೆ ಸೇಫ್ಟಿ, ಹಿಜಾಬ್ ಹಾಕಿದರೆ ಅವರ ಬ್ಯೂಟಿ ಕಾಣಿಸುವುದಿಲ್ಲ, ಅವರಿಗೆ ರಕ್ಷಣೆ, ಸೇಫ್ಟಿ ಇರುತ್ತದೆ ಎಂಂಬ ಅರ್ಥದಲ್ಲಿ ಮಾತನಾಡಿದ್ದೇನೆಯೇ ಹೊರತು ಹಿಜಾಬ್ ಧರಿಸದಿದ್ದರೆ ರೇಪ್ ಆಗುತ್ತದೆಂದು ಹೇಳಿಲ್ಲ ಎಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.