ಉತ್ತರಪ್ರದೇಶ (ವಿಶ್ವ ಕನ್ನಡಿಗ ನ್ಯೂಸ್) : ಮದುವೆ ಸಮಾರಂಭಕ್ಕೆಂದು ಬಂದ ಮಕ್ಕಳು, ಮಹಿಳೆಯರು ಸೇರಿ 13 ಮಂದಿ ಬಾವಿಯಲ್ಲಿ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರಪ್ರದೇಶದ ಕುಶಿನಗರದಲ್ಲಿ ಬುಧವಾರ ನಡೆದಿದೆ.
ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆ ಮಾಡುವುದು ಕುಟುಂಬದ ಸಂಪ್ರದಾಯವಾಗಿದ್ದು, ಗಂಗೆ ಪೂಜೆಗೆಂದು ಬಾವಿ ಬಳಿ ನೂರಾರು ಜನರು ಸೇರಿದ್ದರು. ಕೆಲವು ಮಹಿಳೆಯರು ಹಾಗೂ ಮಕ್ಕಳು ಗಂಗೆ ಪೂಜೆಯನ್ನು ಬಾವಿಯ ಮೇಲ್ಚಾವಣಿ ಮೇಲೆ ಕುಳಿತು ನೋಡುತ್ತಿದ್ದರು. ಬಾವಿಯು ಹಳೆಯದಾಗಿದ್ದು, ಮೇಲ್ಚಾವಣಿ ಕುಸಿದು ಬಿದ್ದು ಕುಳಿತಿದ್ದ ಮಹಿಳೆಯರು ಹಾಗೂ ಮಕ್ಕಳು ಬಾವಿಗೆ ಬಿದ್ದಿದ್ದಾರೆ. ಬಳಿಕ ಬಾವಿಯೊಳಗೆ ಬಿದ್ದ ತಮ್ಮ ಕುಟುಂಬಸ್ಥರನ್ನು ಕಾಪಾಡಲು ಒಬ್ಬರ ಹಿಂದೆ ಒಬ್ಬರು ಮಹಿಳೆಯರು ಬಾವಿಗೆ ಹಾರಿದ್ದಾರೆ. ಹೀಗೆ ಸುಮಾರು 25ಕ್ಕೂ ಹೆಚ್ಚು ಮಂದಿ ಮಹಿಳೆಯರು ಬಾವಿಗೆ ಬಿದ್ದಿದ್ದಾರೆ.
ಬಳಿಕ ಸ್ಥಳದಲ್ಲಿದ್ದವರು ಕೆಲವರನ್ನು ರಕ್ಷಣೆ ಮಾಡಿದ್ದಾರೆ. ಆದರೆ, ಘಟನೆಯಲ್ಲಿ 9 ಮಕ್ಕಳು ಸೇರಿ 13 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 18 ಮಂದಿ ಮಹಿಳೆಯರಿಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.