ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್): ರೇಡಿಯೋ ಮಿರ್ಚಿಯಲ್ಲಿ ಹಲವು ವರ್ಷ ರೆಡಿಯೋ ಜಾಕಿಯಾಗಿ ಎಫ್ ಎಂ ಪ್ರಿಯರಿಗೆ ಚಿರಪರಿಚಿತರಾಗಿದ್ದ ಆರ್.ಜೆ ರಚನಾ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಜೆ.ಪಿ. ನಗರದ ಪ್ಲಾಟ್ ನಲ್ಲಿ ರಚನಾಗೆ ಎದೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಆರ್ ಜೆ ರಚನಾ (39) ಕಳೆದ 3 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದರು. ಇದರಿಂದಾಗಿ ಅವರು ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎನ್ನಲಾಗಿದೆ.
91.1 ಎಫ್.ಎಂ ರೇಡಿಯೋ ಸಿಟಿಯಲ್ಲಿ ಆರ್.ಜೆ ಆಗಿ ಕೆಲಸ ಮಾಡಿಕೊಂಡಿದ್ದ ರಚನಾ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಸಿನಿಮಾದಲ್ಲಿ ನಾಯಕ ನಟ ರಕ್ಷಿತ್ ಶೆಟ್ಟಿ ತಂಗಿಯಾಗಿ ಅಭಿನಯಿಸಿದ್ದರು.
ರಚನಾ ತಂದೆ-ತಾಯಿ ಚಾಮರಾಜಪೇಟೆಯಲ್ಲಿ ವಾಸವಿದ್ದು, ರಚನಾ ಪಾರ್ಥೀವ ಶರೀರವನ್ನು ಚಾಮರಾಜ ಪೇಟೆ ನಿವಾಸಕ್ಕೆ ರವಾನಿಸಲಾಗುವದು ಎಂದು ರಚನಾ ಸ್ನೇಹಿತರು ತಿಳಿಸಿದ್ದಾರೆ. ರಚನಾ ಅವರ ನಿಧನದ ಹಿನ್ನೆಲೆಯಲ್ಲಿ ಕುಟುಂಬಸ್ಥರು, ರಚನಾ ಅವರ ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ರಚನಾ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.