ಮಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶಗಳಲ್ಲಿ 2022ರ ಫೆ.28 ರಿಂದ ಮಾರ್ಚ್ 5 ರವರೆಗೆ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ಭಾರತೀಯ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.
ಸರ್ಕಾರದಿಂದ ನಡೆಯುವ ಯಾವುದೇ ಸಭೆ, ಸಮಾರಂಭ ಕಾರ್ಯಕ್ರಮಗಳಿಗೆ, ಬ್ಯಾಂಕ್, ಎಟಿಎಂ ಭದ್ರತಾ ಸಿಬ್ಬಂದಿಗಳು ಮತ್ತು ಕೋವಿಡ್-19 ನಿಯಂತ್ರಣ ಕರ್ತವ್ಯದಲ್ಲಿ ಸಿಬ್ಬಂದಿಗಳ ಕರ್ತವ್ಯ ನಿರ್ವಹಿಸುವ ಸ್ಥಳಗಳಿಗೆ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೋವಿಡ್-19ಕ್ಕೆ ಸಂಬಂಧಿಸಿದಂತೆ ಜಾರಿಗೊಳಿಸಲಾಗಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.