(ವಿಶ್ವ ಕನ್ನಡಿಗ ನ್ಯೂಸ್) : ಪಂಜಾಬ್ ಕಿಂಗ್ಸ್ ತಂಡವು ತನ್ನ ಟ್ವಿಟ್ಟರ್ ಖಾತೆಯಲ್ಲಿ ನೂತನ ನಾಯಕನ ಹೆಸರು ಘೋಷಣೆ ಮಾಡಿದೆ. ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ಹಾಗೂ ಕನ್ನಡಿಗ ಮಯಾಂಕ್ ಅಗರ್ವಾಲ್ ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಮೂಲಕ ಪಂಜಾಬ್ ತಂಡಕ್ಕೆ ಕೆಎಲ್ ರಾಹುಲ್ ಬಳಿಕ ಇದೀಗ ಮತ್ತೋರ್ವ ಕನ್ನಡಿಗ ನಾಯಕನಾಗಿದ್ದಾನೆ. ಈ ಹಿಂದಿನ ಆವೃತ್ತಿಯಲ್ಲಿ ರಾಹುಲ್ ಗಾಯಗೊಂಡಾಗ ಒಂದೆರಡು ಪಂದ್ಯಗಳಲ್ಲಿ ಮಯಾಂಕ್ ತಂಡವನ್ನು ಮುನ್ನಡೆಸಿದ್ದಾರೆ. 31ರ ಹರೆಯದ ಮಾಯಾಂಕ್ ಐಪಿಎಲ್ ನಲ್ಲಿ 100 ಪಂದ್ಯಗಳನ್ನಾಡಿದ ಅನುಭವ ಹೊಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.