ಮಂಗಳೂರು (ವಿಶ್ವಕನ್ನಡಿಗ ನ್ಯೂಸ್) : ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಸಂಯೋಜಕರಾಗಿ, ಪಾಣಿಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕದ ಉಸ್ತುವಾರಿಯಾಗಿ ಪುದು ಗ್ರಾ ಪಂ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರೂ ಆಗಿರುವ ಅಖ್ತರ್ ಹುಸೈನ್ ಎಂ ಎಂ ಅವರನ್ನು ನೇಮಿಸಲಾಗಿದೆ.
ಕರ್ನಾಟಕ ವಿಧಾನಸಭಾ ವಿಪಕ್ಷ ಉಪನಾಯಕರು ಹಾಗೂ ಮಂಗಳೂರು ಶಾಸಕ ಯು ಟಿ ಖಾದರ್ ಅವರ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್ ಈ ನೇಮಕ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ, ಹಿರಿಯ ಕಾಂಗ್ರೆಸ್ ಮುಖಂಡ ಹಾಜಿ ಇಬ್ರಾಹಿಂ ಕೋಡಿಜಾಲ್ ಅವರು ನೇಮಕಾತಿ ಆದೇಶ ಪ್ರತಿಯನ್ನು ಅಖ್ತರ್ ಹುಸೈನ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭ ಪುದು ಗ್ರಾ ಪಂ ಸದಸ್ಯರಾದ ಹಾಶೀರ್ ಪೇರಿಮಾರ್, ಫೈಝಲ್ ಅಮ್ಮೆಮಾರ್, ರಿಯಾಝ್ ಅಮ್ಮೆಮಾರ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಫಯಾಝ್ ಅಮ್ಮೆಮಾರ್, ಗ್ರಾ ಪಂ ಮಾಜಿ ಸದಸ್ಯರಾದ ಅಬ್ದುಲ್ ಲತೀಫ್ ಹತ್ತನೇ ಮೈಲುಕಲ್ಲು, ಝುಬೈರ್ ಅಮ್ಮೆಮಾರ್, ಫರ್ವೀಝ್ ಪಬ್ಬಿ ಅಮ್ಮೆಮಾರ್, ಝುಲ್ಫಿಖರ್ ಹುಸೈನ್ ಅಮ್ಮೆಮಾರ್ ಮೊದಲಾದವರು ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.