ಬೆಳ್ತಂಗಡಿ(ವಿಶ್ವಕನ್ನಡಿಗ ನ್ಯೂಸ್): ಕೆಎಸ್ಸಾರ್ಟಿಸಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟು, ಗಂಭೀರವಾಗಿ ಗಾಯಗೊಂಡ ಇನ್ನೋರ್ವ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟ ಘಟನೆ ಗರ್ಡಾಡಿ ಸಮೀಪದ ನಂದಿಬೆಟ್ಟ ಬಳಿ ಶುಕ್ರವಾರ ಸಂಜೆಯ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಉಪ್ಪಿನಂಗಡಿ ಸಮೀಪದ ಹಿರೆಬಂಡಾಡಿ ನಿವಾಸಿ ಅಬ್ದುರ್ರಝಾಕ್ ಎಂಬವರ ಪುತ್ರರಾದ ಸಿರಾಜ್ ಮತ್ತು ಕುತುಬುದ್ದೀನ್ ಸಾದಿಕ್ ಎಂದು ತಿಳಿದುಬಂದಿದೆ.
ಬೆಳ್ತಂಗಡಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.