ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಹೆಂಡತಿ ಜೊತೆ ದೇಶ ಸುತ್ತಲು ಮನೆಗಳ್ಳತನ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಆರ್ ಪುರಂ ನಿವಾಸಿ ಇಮ್ರಾನ್ ಖಾನ್ ಬಂಧಿತ ಆರೋಪಿ.
ಮನೆಗಳ್ಳತನವನ್ನೇ ಕಸುಬು ಮಾಡಿಕೊಂಡಿದ್ದ ಈತ ಈ ಹಿಂದೆ ಆರು ಪ್ರಕರಣದಲ್ಲಿ ಭಾಗಿಯಾಗಿದ್ದ. ಕದ್ದ ವಸ್ತುಗಳನ್ನು ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿದ್ದ ಆರೋಪಿ ಕಳ್ಳತನ ಮಾಡಿ ಹೆಂಡತಿಗೆ ದೇಶ ಸುತ್ತಿಸುತ್ತಿದ್ದ ಎನ್ನಲಾಗಿದೆ.
ಆರೋಪಿ ವಿರುದ್ಧ ಮಹದೇವಪುರ , ಕೆ.ಆರ್ ಪುರ ಹಾಗೂ ಮಾರತ್ ಹಳ್ಳಿ ಸೇರಿದಂತೆ ಹಲವೆಡೆ ಪ್ರಕರಣ ದಾಖಲಾಗಿದೆ. ಸದ್ಯ ಗೋವಿಂದರಾಜನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, 8.6 ಲಕ್ಷ ಮೌಲ್ಯದ 147 ಗ್ರಾಂ ಚಿನ್ನ , 1ಕೆ.ಜಿ 517 ಗ್ರಾಂ ಬೆಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.