ಹುಬ್ಬಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ಕಳೆದ ಹತ್ತು ದಿನಗಳಲ್ಲಿ ಉತ್ತರ ಕರ್ನಾಟಕದದಲ್ಲಿ ಮೂರು ಅಹಿತಕರ ಘಟನೆಗಳು ನಡೆದಿವೆ, ಧಾರವಾಡದ ನುಗ್ಗಿಕೆರೆಯ ಘಟನೆ, ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಹಾಗೂ ಶನಿವಾರ ತಡರಾತ್ರಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆಗಳು ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಜನರ ಮನಸ್ಸಿನಲ್ಲಿ ಹಿಂದೂ-ಮುಸ್ಲಿಂ ಎಂಬ ಭಾವನೆಗಳನ್ನು ಕೆರಳಿಸುವ ಕೆಲಸವನ್ನು ಸರ್ಕಾರವೇ ಮಾಡುತ್ತಿದೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್ ರಾವ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಎಎಪಿಯಿಂದ ಹಮ್ಮಿಕೊಂಡಿದ್ದ ಸೌಹಾರ್ದ ಸೈಕಲ್ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಕ್ರಮಗಳು ಶೂನ್ಯವಾಗಿದ್ದು, ಇದನ್ನು ಮರೆಮಾಚಿ ಜನರ ಗಮನ ಬೇರೆ ಕಡೆ ಸೆಳೆಯಲು ರಾಜ್ಯ ಸರ್ಕಾರವೇ ಕೋಮುಗಲಭೆಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂದು ಅವರು ಆರೋಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.