ಕುಂದಾಪುರ (ವಿಶ್ವ ಕನ್ನಡಿಗ ನ್ಯೂಸ್) : ಹಿಂದು ಜಾಗರಣ ವೇದಿಕೆ ಗಂಗೊಳ್ಳಿ ಘಟಕದ ವತಿಯಿಂದ ಗಂಗೊಳ್ಳಿಯ ಶ್ರೀ ವೀರೇಶ್ವರ ದೇವಸ್ಥಾನದ ವಠಾರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ ಜರುಗಿತು.
ಹಂಗಾರಕಟ್ಟೆ ಶ್ರೀ ಬಾಳೆಕುದ್ರು ಮಠದ ಶ್ರೀ ನೃಸಿಂಹಾಶ್ರಮ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿಂದು ಜಾಗರಣ ವೇದಿಕೆ ದಕ್ಷಿಣ ಪ್ರಾಂತೀಯ ಕಾರ್ಯಕಾರಣಿ ಸದಸ್ಯ ರಾಧಾಕೃಷ್ಣ ಅಡ್ಯಂತಾಯ ದಿಕ್ಸೂಚಿ ಭಾಷಣ ಮಾಡಿದರು. ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಗೋವಿಂದ ಬಾಬು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.
ನಾಯಕವಾಡಿ ಗುಜ್ಜಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಕಾರ್ಯದರ್ಶಿ ಜಿ.ಸುಬ್ಬ, ಗಂಗೊಳ್ಳಿ ಖಾರ್ವಿಕೇರಿ ಶ್ರೀ ಮಹಾಂಕಾಳಿ ದೇವಸ್ಥಾನದ ಪಾತ್ರಿ ನಾಗರಾಜ ಖಾರ್ವಿ, ಗುಜ್ಜಾಡಿ ಬ್ರಹ್ಮ ಬಂಟರ ಗರಡಿಯ ಪಾತ್ರಿ ರಾಘವೇಂದ್ರ ಪೂಜಾರಿ, ಹಿಂದು ಜಾಗರಣ ವೇದಿಕೆ ಉಡುಪಿ ಜಿಲ್ಲಾಧ್ಯಕ್ಷ ಪ್ರಶಾಂತ ನಾಯಕ್ ಉಪಸ್ಥಿತರಿದ್ದರು.ಹಿಂಜಾವೇ ಗಂಗೊಳ್ಳಿ ಘಟಕದ ಅಧ್ಯಕ್ಷ ಗೋವಿಂದ್ರಾಯ ಶೇರುಗಾರ್ ಸ್ವಾಗತಿಸಿದರು.
ಪ್ರಧಾನ ಕಾರ್ಯದರ್ಶಿ ಯಶವಂತ ಗಂಗೊಳ್ಳಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಂದರ ಜಿ. ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮಕ್ಕೂ ಮುನ್ನ ಗಂಗೊಳ್ಳಿ ಶ್ರೀ ರಾಮ ಮಂದಿರದ ಬಳಿಯಿಂದ ಶ್ರೀ ವೀರೇಶ್ವರ ದೇವಸ್ಥಾನದ ತನಕ ಮಹಿಳೆಯರ ಚಂಡೆ ವಾದನ, ವಾದ್ಯಘೋಷಗಳು, ಕೇಸರಿ ಪೇಟಧಾರಿಗಳೊಂದಿಗೆ ಆಕರ್ಷಕ ಶೋಭಾಯಾತ್ರೆ ನಡೆಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.