ನಾಗದೇವನಹಳ್ಳಿ (ವಿಶ್ವ ಕನ್ನಡಿಗ ನ್ಯೂಸ್) : ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿಯ ಗೀತಂ ವಿವಿಯ ಹಾಸ್ಟೆಲ್ ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ತಿರುವು ಬಂದಿದ್ದು, ವಿದ್ಯಾರ್ಥಿನಿ ಹಾಸ್ಟೆಲ್ ನ ಏಳನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ.
ಮೃತ ಯುವತಿಯನ್ನು ಉಗಾಂಡ ದೇಶದ ಹಸೀನಾ ಅಗಷ (24 ವರ್ಷ) ಎಂದು ಗುರುತಿಸಲಾಗಿದ್ದು, ಬಿಬಿಎ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರೆಂದು ತಿಳಿದು ಬಂದಿದೆ. ಬುಧವಾರ ರಾತ್ರಿ ಒಣಗಿಸಲು ಹಾಕಿದ್ದ ಬಟ್ಟೆಯನ್ನು ತರಲು ಏಳನೆ ಮಹಡಿಯಲ್ಲಿ ಬಟ್ಟೆ ಎತ್ತಿಕೊಳ್ಳುವಾಗ, ಆಕಸ್ಮಿಕವಾಗಿ ಬಿದ್ದು ಸಾವನಪ್ಪಿದ್ದಾರೆ ಎನ್ನಲಾಗಿದೆ.
ಈ ಘಟನೆಗೆ ಕಾಲೇಜು ಆಡಳಿತ ಮಂಡಳಿಯ ನಿರ್ಲಕ್ಷ್ಯ ಧೋರಣೆಯೇ ಕಾರಣವೆಂದು ಕೆರಳಿದ ವಿದ್ಯಾರ್ಥಿಗಳು ದಾಂದಲೆ ಎಬ್ಬಿಸಿದ್ದು, ಕಲ್ಲು ತೂರಾಟ ನಡೆಸಿ ಕಾಲೇಜು, ಹಾಸ್ಟೆಲ್ ಕಿಟಕಿ ಗಾಜುಗಳನ್ನು ಒಡೆದಿದ್ದಾರೆ. ವಿಷಯ ತಿಳಿದ ಡಿವೈಎಸ್ಪಿ ನಾಗರಾಜ್, ಇನ್ಸ್ಪೆಕ್ಟರ್ ಸತೀಶ್ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮೃತಳ ಶವವನ್ನು ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸ್ ಇಲಾಖೆ ಮೂಲಗಳು ತಿಳಿಸಿವೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.