ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಕೊಲೆಯಾದ ಯುವಕ
ವಿಜಯನಗರ (ವಿಶ್ವ ಕನ್ನಡಿಗ ನ್ಯೂಸ್) : ತಡರಾತ್ರಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಬೇವಿನಹಳ್ಳಿಯ ತಾಂಡಾದಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ದಾವಣಗೆರೆಯ ನಿಟ್ಟುವಳ್ಳಿ ಗ್ರಾಮದ ಧನ್ಯ ಕುಮಾರ್ (31) ಎಂದು ಗುರುತಿಸಲಾಗಿದೆ.
ಕೊಲೆಯಾದ ಧನ್ಯ ಕುಮಾರ್ ಕನ್ನಡ ಪರ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವುದಾಗಿ ಹೇಳಲಾಗಿದೆ. ನಿನ್ನೆ ತಡರಾತ್ರಿ ಸ್ನೇಹಿತರ ಜೊತೆಗೆ ಊಟಕ್ಕೆ ಹೋಗಿದ್ದು, ಇಂದು ಬೆಳಗ್ಗೆ ಗ್ರಾಮದ ಜಮೀನು ಒಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸದ್ಯ ಅರಸಿಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆ ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.