ಈ ಹಿಂದೆ ಲೂಕಿ ಫರ್ಗೂಸನ್ ಹೆಸರಲ್ಲಿದ್ದ ದಾಖಲೆಯನ್ನು ತನ್ನದಾಗಿಸಿದ ಉಮ್ರಾನ್ ಮಲಿಕ್..
(ವಿಶ್ವ ಕನ್ನಡಿಗ ನ್ಯೂಸ್) ; ಸನ್ ರೈಸರ್ಸ್ ಹೈದರಾಬಾದ್ ತಂಡದ ವೇಗಿ ಉಮ್ರಾನ್ ಮಲಿಕ್ ಐಪಿಎಲ್ ಇತಿಹಾಸದಲ್ಲೇ ಅತೀ ವೇಗದ ಬಾಲ್ ಎಸೆದು ದಾಖಲೆ ಬರೆದಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಉಮ್ರಾನ್ ಮಲಿಕ್ ಗಂಟೆಗೆ 154 ಕಿಮೀ ವೇಗದಲ್ಲಿ ಬೌಲಿಂಗ್ ಮಾಡಿ ಇದುವರೆಗೆ ಗುಜರಾತ್ ಟೈಟಾನ್ಸ್ ವೇಗಿ ಲೂಕಿ ಫರ್ಗೂಸನ್ ಹೆಸರಲ್ಲಿದ್ದ ದಾಖಲೆಯನ್ನು ತನ್ನ ಹೆಸರಿಗೆ ಬರೆಸಿಕೊಂಡಿದ್ದಾರೆ.
ಈ ಹಿಂದೆ ಫರ್ಗೂಸನ್ ಗಂಟೆಗೆ 153.6 ಕಿಮೀ ವೇಗದಲ್ಲಿ ಚೆಂಡೆಸೆದು ದಾಖಲೆ ಬರೆದಿದ್ದರು, ಆ ದಾಖಲೆಯನ್ನು ಇದೀಗ ಉಮ್ರಾನ್ ಮಲಿಕ್ ಹಿಂದಿಕ್ಕಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.