ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಸ್ನೇಹಿತನನ್ನು ಭೇಟಿಯಾಗಲು ದುಬೈಗೆ ಆಗಮಿಸಿದ್ದ ಶಿವಸೇನೆ ಶಾಸಕ ರಮೇಶ್ ಲಟ್ಕೆ ಅವರು ದುಬೈನಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮುಂಬೈನ ಅಂಧೇರಿ ಪೂರ್ವ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ರಮೇಶ್ ಲಟ್ಕೆ ಅವರಿಗೆ 52 ವರ್ಷ ವಯಸ್ಸಾಗಿತ್ತು. ಲಟ್ಕೆ ತಮ್ಮ ಕುಟುಂಬದವರೊಂದಿಗೆ ಶಾಪಿಂಗ್ಗೆ ತೆರಳಿದ್ದ ಸಂದರ್ಭದಲ್ಲಿ ಸಾವನ್ನಪ್ಪಿದ್ದಾರೆ. ಈಗ ನಾವು ಅವರ ಮೃತದೇಹವನ್ನು ಭಾರತಕ್ಕೆ ಕರೆತರಲು ಪ್ರಯತ್ನಿಸುತ್ತಿದ್ದೇವೆ ಎಂದು ಸಾರಿಗೆ ಸಚಿವ ಅನಿಲ್ ಪರಬ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.