ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಅತ್ಯುತ್ತಮ ಆಲ್ ರೌಂಡರ್ ಗಳಲ್ಲಿ ಒಬ್ಬರಾಗಿದ್ದ ಆಂಡ್ರ್ಯೂ ಸೈಮಂಡ್ಸ್..
ಸಿಡ್ನಿ (ವಿಶ್ವ ಕನ್ನಡಿಗ ನ್ಯೂಸ್) : ಆಸ್ಟ್ರೇಲಿಯಾದ ಮಾಜಿ ಟೆಸ್ಟ್ ಕ್ರಿಕೆಟಿಗ ಆಂಡ್ರ್ಯೂ ಸೈಮಂಡ್ಸ್ ಅವರು ಕ್ವೀನ್ಸ್ ಲ್ಯಾಂಡ್ ನಲ್ಲಿ ಉಂಟಾದ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಆಸ್ಟ್ರೇಲಿಯಾ ಪರ 26 ಟೆಸ್ಟ್, 198 ಏಕದಿನ ಮತ್ತು 14 ಟಿ20 ಪಂದ್ಯಗಳನ್ನು ಆಡಿದ್ದಾರೆ.
ಕ್ರಿಕೆಟ್ ಆಸ್ಟ್ರೇಲಿಯಾದ ಪ್ರಕಾರ, ಅವರು ಆಸ್ಟ್ರೇಲಿಯಾ ಕ್ರಿಕೆಟ್ ಕಂಡ ಅತ್ಯುತ್ತಮ ಆಲ್ ರೌಂಡರ್ ಗಳಲ್ಲಿ ಒಬ್ಬರಾಗಿದ್ದರು. ಕ್ರಿಕೆಟ್ ಆಸ್ಟ್ರೇಲಿಯಾದ ವರದಿಯ ಪ್ರಕಾರ, ಹರ್ವೆ ರೇಂಜ್ ರಸ್ತೆಯಲ್ಲಿ ರಾತ್ರಿ 11 ಗಂಟೆಯ ನಂತರ ಕಾರು ಚಲಾಯಿಸುತ್ತಿದ್ದಾಗ ಆಲಿಸ್ ರಿವರ್ ಬ್ರಿಡ್ಜ್ ಬಳಿ ಕಾರು ಪಲ್ಟಿಯಾಗಿದೆ. ತಂತ್ರಗಾರಿಕೆಯ ಆಫ್ ಬ್ರೇಕ್ ಬೌಲರ್ ಆಗಿದ್ದ ಅವರು 24 ಟೆಸ್ಟ್ ವಿಕೆಟ್ ಗಳನ್ನು ಪಡೆಡಿದ್ದಾರೆ. ಅವರು ಅತ್ಯುತ್ತಮ ಫೀಲ್ಡರ್ ಗಳಲ್ಲಿ ಒಬ್ಬರಾಗಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.