ಕೋಲಾರ ( ವಿಶ್ವಕನ್ನಡಿಗ ನ್ಯೂಸ್ ) : ಸರ್ಕಾರದ ವಿವಿಧ ಯೋಜನೆಗಳ ಮೂಲಕ ಅರ್ಹ ಅಲ್ಪಸಂಖ್ಯಾತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ವೆಂಕಟ್ ರಾಜಾ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಾನ್ಯ ಪ್ರಧಾನ ಮಂತ್ರಿಗಳ ಅಲ್ಪಸಂಖ್ಯಾತರ ಅಭಿವೃದ್ಧಿಯ ಹೊಸ 15 ಅಂಶಗಳ ಕಾರ್ಯಕ್ರಮದ ಜಿಲ್ಲಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಪೂರ್ಣ ಪ್ರಮಾಣದಲ್ಲಿ ಅಲ್ಪಸಂಖ್ಯಾತರಿಗೆ ಸೌಲಭ್ಯಗಳನ್ನು ಒದಗಿಸಬೇಕು. ನಮ್ಮಲ್ಲಿ 4 ಮೌಲಾನಾ ಶಾಲೆಗಳಿವೆ ಇತ್ತೀಚಿನ ದಿನಗಳಲ್ಲಿ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಾಗಿದೆ ಅವರ ಜನಸಂಖ್ಯೆಗೆ ತಕ್ಕಂತೆ ಸರ್ಕಾರಿ ಸವಲತ್ತುಗಳನ್ನು ಒದಗಿಸಬೇಕು. ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ಪ್ರಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹದೇವಕೆ ಅವರು ಮಾತನಾಡಿ ಕರ್ನಾಟಕ ಸರ್ಕಾರವು ರಾಜ್ಯದಲ್ಲಿರುವ ಅಲ್ಪಸಂಖ್ಯಾತ ಸಮುದಾಯದವರ ಶೈಕ್ಷಣಿಕ ಹಾಗೂ ಸರ್ವತೋಮುಖ ಅಭಿವೃದ್ಧಿಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಬೇರ್ಪಟ್ಟು 1999-2000 ನೇ ಸಾಲಿನಿಂದ ಪ್ರತ್ಯೇಕವಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯನಿರ್ವಹಿಸುತ್ತಿದೆ.
ಜಿಲ್ಲಾ ಮಟ್ಟದಲ್ಲಿ ಕಚೇರಿ ಹಾಗೂ ತಾಲ್ಲೂಕುಗಳಲ್ಲಿ ಪ್ರತ್ಯೇಕವಾದ ತಾಲ್ಲೂಕು ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಮತ್ತು ಮಾಹಿತಿ ಕೇಂದ್ರಗಳನ್ನು ಸ್ಥಾಪಿಸುವುದರ ಮೂಲಕ ಅಲ್ಪಸಂಖ್ಯಾತರ ಸಮುದಾಯದವರಿಗೆ ಭಾರತ ಸಂವಿಧಾನದ ಅನುಚ್ಛೇದ 15 ( 4 ) ರಡಿ ಯಲ್ಲಿ ಶೈಕ್ಷಣಿಕ ಹಾಗೂ 16 ( 4 ) ರಡಿಯಲ್ಲಿ ಔದ್ಯೋಗಿಕ ಮೀಸಲಾತಿ ಸೌಲಭ್ಯಗಳ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲೆಯಲ್ಲಿ ಈಗಾಗಲೇ ಇರುವ 29 ಮುರಾರ್ಜಿ ಅರ್ಹ ವಿದ್ಯಾರ್ಥಿಗಳಿಗೆ ದೇಸಾಯಿ ಶಾಲೆಗಳನ್ನು ಅಭಿವೃದ್ಧಿಪಡಿಸಬೇಕು . ವಿದ್ಯಾಸಿರಿ ಯೋಜನೆಯಡಿ ವಿದ್ಯಾರ್ಥಿವೇತನವನ್ನು ನೀಡಲಾಗುತ್ತಿದೆ . ಜಿಲ್ಲೆಯಲ್ಲಿ ಆರು ವಿದ್ಯಾರ್ಥಿನಿಲಯಗಳಿದ್ದು , ಅದರಲ್ಲಿ ಮೂರು ಕಟ್ಟಡಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಉಳಿದ ಮೂರು ಕಟ್ಟಡಗಳು ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಆ ವಿದ್ಯಾರ್ಥಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದ ಸ್ಥಳದಲ್ಲಿ ಮೂಲಭೂತ ಸೌಲಭ್ಯಗಳ ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.
2021-22 ನೇ ಸಾಲಿನಲ್ಲಿ ಇಲ್ಲಿಯವರೆಗೂ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ 21,885 ಮಂದಿ ಅಲ್ಪಸಂಖ್ಯಾತರ ಸಮುದಾಯದವರು ಅನುಕೂಲ ಪಡೆಯುತ್ತಿರುತ್ತಾರೆ ಹಾಗೂ ಭಾಗ್ಯಲಕ್ಷ್ಮಿ ಯೋಜನೆಯಡಿ 2021-22 ನೇ ಸಾಲಿನಲ್ಲಿ ಇಲ್ಲಿಯವರೆಗೆ 90 ಮಂದಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಅರ್ಜಿಗಳಿಗೆ ಆನ್ಲೈನ್ಯಲ್ಲಿ ಮಂಜೂರಾತಿಯನ್ನು ನೀಡಲಾಗಿದೆ.
ಜಿಲ್ಲೆಯಲ್ಲಿ 44,669 ಅಲ್ಪಸಂಖ್ಯಾತ ವಿದ್ಯಾರ್ಥಿಗಳಿದ್ದಾರೆ ಹಾಗೂ ಒಟ್ಟು 167 ಉರ್ದು ಶಾಲೆಗಳಿಗೆ 2021-22 ನೇ ಸಾಲಿಗೆ ರಾಷ್ಟ್ರೀಯ ವಿದ್ಯಾರ್ಥಿವೇತನಕ್ಕೆ ನವೀಕೃತ ಅರ್ಜಿಗಳು ಸೈರಿದಂತೆ ಒಟ್ಟಾರೆ 26,204 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದರು . ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಚಿನ್ ಘೋರ್ಪಡೆ , ಜಿಲ್ಲಾ ಮತ್ತು ತಾಲ್ಲೂಕು ಮಟದ ಅಧಿಕಾರಿಗಳು ಸೇರಿದಂತೆ ಮತಿತರರು ಉಪಸಿತರಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.