ಶ್ರೀನಿವಾಸಪುರ ( ವಿಶ್ವಕನ್ನಡಿಗ ನ್ಯೂಸ್ ) : ಇಲ್ಲಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮೇ .28 ರಂದು ಬೆಳಿಗ್ಗೆ 11 ಗಂಟೆಗೆ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು .
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು , ಜಿಲ್ಲಾಡಳಿತ , ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸ್ವಾತಂತ್ರ್ಯ ಸೇನಾನಿಗಳ ಸ್ಮರಣೆ ಮಾಡಲಾಗುವುದು ಎಂದು ಹೇಳಿದರು. ಇದು ದೇಶ ಭಕ್ತಿ ಹಾಗೂ ಸ್ವಾತಂತ್ರ್ಯ ಹೋರಾಟಕ್ಕೆ ಸಂಬಂಧಿಸಿದ ವಿಷಯವಾಗಿದ್ದು , ಯುವ ಸಮುದಾಯಕ್ಕೆ ಸ್ವಾಂತಂತ್ರ್ಯದ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು.
ತಾಲ್ಲೂಕು ಕೇಂದ್ರದಲ್ಲಿ ನಡೆಯುವ ಈ ಮುಖ್ಯ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಎಲ್ಲಾ ಕಡೆಗಳಿಂದ ಜನರು ಭಾಗವಹಿಸಬೇಕಾಗಿದೆ . ಅದಕ್ಕೆ ಪೂರಕವಾಗಿ ಅಧಿಕರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಡಿ.ಆರ್.ರಾಜಪ್ಪ ತಂಡದಿಂದ ನಾಡಗೀತೆ ಹಗೂ ದೇಶಭಕ್ತಿ ಗೀತೆಗಳ ಗಾಯನ ಏರ್ಪಡಿಸಲಾಗಿದೆ . ಅಜಿತ್ ಶೆಟ್ಟಿ ಹರಂಜೆ ಅವರಿಂದ ಭಾಷಣ ಇರುತ್ತದೆ . ಟಿ.ಆರ್.ರಕ್ಷಿತ ತಂಡದಿಂದ ನಾಟಕ ಪ್ರದರ್ಶನ , ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರ್ನಾಟಕದ ಕೊಡುಗೆ ಎಂಬ ಸಾಕ್ಷ್ಯ ಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕರಿ ಎಸ್.ಆನಂದ್ , ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಹುಸೇನ್ ಸಾಬ್ , ತೋಟಗಾರಿಕೆ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸನ್ , ಕೃಷಿ ಅಧಿಕಾರಿ ಮಂಜುನಾಥರೆಡ್ಡಿ , ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ , ಜಗದೀಶ್ , ಗುರುರಾಜರಾವ್ ಇದ್ದರು.
ವರದಿ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.