(www.vknews.in) : ನೈರುತ್ಯ ಮುಂಗಾರು ಮೇ. 29 ರ ಭಾನುವಾರ ಕೇರಳಕ್ಕೆ ಪ್ರವೇಶಿಸಿದ್ದು, ಜೂನ್ 1 ರಿಂದ ಕರ್ನಾಟಕಕ್ಕೆ ಪ್ರವೇಶವಾಗಲಿದೆ. ಜೂನ್ 2 ರಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಜೂನ್ 2 ರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 2 ರ ರಾತ್ರಿ ಅಥವಾ ಜೂನ್ 3 ಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ, ಮಲೆನಾಡಿನ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.