ಇತ್ತೀಚೆಗೆ ಮಸೀದಿ ಧ್ವನಿವರ್ಧಕಗಳ ವಿಚಾರದಲ್ಲಿ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಸುದ್ದಿಯಲ್ಲಿದ್ದ ರಾಜ್ ಠಾಕ್ರೆ..
ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಇಂದು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ತಿಂಗಳ ಆರಂಭದಲ್ಲಿ ಮೊಣಕಾಲು ಮತ್ತು ಬೆನ್ನಿನ ಸಮಸ್ಯೆಗಳಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುವುದಾಗಿ ಹೇಳಿದ್ದ ಅವರಿಗೆ ನಾಳೆ ಸೊಂಟದ ಶಸ್ತ್ರ ಚಿಕಿತ್ಸೆ ನಡೆಯಲಿದೆ.
ಇತ್ತೀಚೆಗೆ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕುವಂತೆ ಗಡುವು ನೀಡುವ ಮೂಲಕ ಸುದ್ದಿಯಲ್ಲಿದ್ದ ರಾಜ್ ಠಾಕ್ರೆ, ಮಸೀದಿ ಧ್ವನಿವರ್ಧಕಗಳ ವಿಚಾರದಲ್ಲಿ ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಮಹಾರಾಷ್ಟ್ರ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ಜೂನ್ 5ರಂದು ಅಯೋಧ್ಯೆಗೆ ತೆರಳಬೇಕಾಗಿದ್ದ ಅವರು ಅನಾರೋಗ್ಯದ ಸಮಸ್ಯೆಯಿಂದಾಗಿ ಈ ಪ್ರವಾಸವನ್ನು ಮುಂದೂಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.