ಪಕ್ಷದಲ್ಲಿ ಇಷ್ಟು ವರ್ಷ ನಾನಾ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ..
ಬೆಂಗಳೂರು (ವಿಶ್ವ ಕನ್ನಡಿಗ ನ್ಯೂಸ್) : ಕೆಪಿಸಿಸಿ ವಕ್ತಾರರಾಗಿದ್ದ ಕಾಂಗ್ರೆಸ್ ನಾಯಕ, ಸುಪ್ರೀಂ ಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪರಿಷತ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅವರು ಅವಕಾಶ ಕೈ ತಪ್ಪಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಬ್ರಿಜೇಶ್ ಕಾಳಪ್ಪ ತಮ್ಮ ಫೇಸ್ಬುಕ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಅವರು, ಪಕ್ಷದಲ್ಲಿ ಇಷ್ಟು ವರ್ಷ ನಾನಾ ಜವಾಬ್ದಾರಿ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಇದೇ ವೇಳೆ ತಮ್ಮನ್ನು ಕರ್ನಾಟಕ ಸರ್ಕಾರದ ಕಾನೂನು ಸಲಹೆಗಾರನಾಗಿ ಸಚಿವ ಸ್ಥಾನದೊಂದಿಗೆ ನೇಮಕಗೊಂಡಿದಕ್ಕೆ ಧನ್ಯವಾದ, ಈ ಹಿನ್ನೆಲೆಯಲ್ಲಿ 1997ರಲ್ಲಿ ಆರಂಭವಾದ ಒಡನಾಟ ಕೊನೆಗೊಳಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.