ಮದ್ರಸ ಪರಿಸರದಲ್ಲಿ ಗಿಡನೆಟ್ಟು, ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ..
ಕಾವು (ವಿಶ್ವ ಕನ್ನಡಿಗ ನ್ಯೂಸ್) : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನೂರುಲ್ ಇಸ್ಲಾಂ ಸೆಕೆಂಡರಿ ಮದ್ರಸ ಕಾವು ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್.ಕೆ.ಎಸ್.ಬಿ.ವಿ ಆಶ್ರಯದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಪ್ರಸ್ತುತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಸೇರಿ ಗಿಡ ನೆಟ್ಟರು. ಪರಿಸರ ಸಂರಕ್ಷಣೆಗೆ ಇಸ್ಲಾಂ ಧರ್ಮವು ನೀಡಿದ ಪ್ರಾಧಾನ್ಯತೆಯನ್ನು ವಿವರಿಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಯಿತು. ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ’ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಥಳೀಯ ಖತೀಬರಾದ ಶುಕೂರ್ ದಾರಿಮಿ ಹಾಗು ಅಧ್ಯಾಪಕರಾದ ನಝೀರ್ ಯಮಾನಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.