ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ) ರವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಬಿಜೆಪಿ ತನ್ನ ರಾಷ್ಟ್ರೀಯ ವಕ್ತಾರರನ್ನು ಉಚ್ಚಾಟಿಸಿದೆ. ನೂಪುರ್ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಅವರನ್ನು ಅಮಾನತುಗೊಳಿಸಲಾಗಿದೆ. ಭಾರಿ ಸಾರ್ವಜನಿಕ ಆಕ್ರೋಶದ ಹಿನ್ನೆಲೆಯಲ್ಲಿ ಬಿಜೆಪಿ ತ್ವರಿತವಾಗಿ ಈ ಕ್ರಮ ಕೈಗೊಂಡಿದೆ.
ಧರ್ಮಗಳು ಗೌರವಿಸುವ ಮಹಾನ್ ವ್ಯಕ್ತಿಗಳನ್ನು ಅವಮಾನಿಸುವುದನ್ನು ತಾನು ಬಲವಾಗಿ ವಿರೋಧಿಸುವುದಾಗಿ ಬಿಜೆಪಿ ಹೇಳಿದೆ. ಬಿಜೆಪಿ ಎಲ್ಲ ಧರ್ಮಗಳನ್ನು ಗೌರವಿಸುತ್ತದೆ. “ಭಾರತದ ಸಹಸ್ರಮಾನಗಳ ಇತಿಹಾಸದಲ್ಲಿ, ಪ್ರತಿಯೊಂದು ಧರ್ಮವು ಇಲ್ಲಿ ಅರಳಿದೆ ಎಂದು ಬಿಜೆಪಿ ಹೇಳಿಕೆಯಲ್ಲಿ ತಿಳಿಸಿದೆ.
ಟಿವಿ ಚರ್ಚೆಯಲ್ಲಿ ನೂಪುರ್ ಶರ್ಮಾ ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಇದರ ನಂತರ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಶುಕ್ರವಾರ ನಡೆದ ಪ್ರತಿಭಟನೆಯ ಸಮಯದಲ್ಲಿ ಘರ್ಷಣೆಗಳು ಭುಗಿಲೆದ್ದವು. 20 ಪೊಲೀಸರು ಸೇರಿದಂತೆ ಕನಿಷ್ಠ 40 ಜನರು ಗಾಯಗೊಂಡಿದ್ದಾರೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕಾಗಿ ಜಿಂದಾಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಂತರ ಡಿಲೀಟ್ ಮಾಡಲಾದ ಈ ಟ್ವೀಟ್ ಅರಬ್ ಜಗತ್ತು ಸೇರಿದಂತೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.