ಮಸ್ಕತ್(ವಿಶ್ವಕನ್ನಡಿಗ ನ್ಯೂಸ್): ಕರ್ನಾಟಕ ಕಲ್ಚರಲ್ ಫೌಂಡೇಷನ್ KCF ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ “ನಾಳೆಗೊಂದು ನೆರಳು” ಎಂಬ ಶೀರ್ಷಿಕೆಯ ಅಡಿಯಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನ ವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮ ಕ್ಕೆ ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಆಡಳಿತ ವಿಭಾಗದ ಕಾರ್ಯದರ್ಶಿ ಜನಾಬ್ ಇಕ್ಬಾಲ್ ಬೊಲ್ಮಾರ್ ಬರ್ಕ ಹಾಗೂ ಕೆಸಿಎಫ್ ಒಮಾನ್ ಇಹ್ಸಾನ್ ವಿಭಾಗ ದ ಅಧ್ಯಕ್ಷ ಇಕ್ಬಾಲ್ ಎರ್ಮಾಳ್ ಸೊಹಾರ್ ಇವರು ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಜನಾಬ್ ಅಯ್ಯೂಬ್ ಕೋಡಿ, ಪ್ರಧಾನ ಕಾರ್ಯದರ್ಶಿ ಸಾದಿಕ್ ಹಾಜಿ ಸುಳ್ಯ, ಕೋಶಾಧಿಕಾರಿ ಜನಾಬ್ ಆರಿಫ್ ಕೋಡಿ ಹಾಗೂ ಸಂಘಟನಾ ಅಧ್ಯಕ್ಷರಾದ ಸಯ್ಯದ್ ಆಬಿದ್ ಅಲ್ ಹೈದ್ರೋಸಿ ಕೊಡಗು ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.