ಮಂಗಳೂರು (www.vknews.in) : ಚಾರ್ಜ್ ಗೆ ಇಟ್ಟಿದ್ದ ಇಲೆಕ್ಟ್ರಿಕ್ ಸ್ಕೂಟರೊಂದು ಬೆಂಕಿಗಾಹುತಿಯಾದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ. ನಗರದ ಬೊಂದೆಲ್ ನಲ್ಲಿರುವ ಮನೆಯ ಗ್ರೌಂಡ್ ಫ್ಲೋರ್ ನಲ್ಲಿ ನಿಲ್ಲಿಸಿ ಚಾರ್ಜ್ ಗೆ ಇಟ್ಟಿದ್ದ ವೇಳೆ ಬೆಂಕಿಗೆ ಆಹುತಿಯಾಗಿದೆ.
ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು, ಇಲೆಕ್ಟ್ರಿಕ್ ಸ್ಕೂಟರ್ ಬೆಂಕಿಗಾಹುತಿಯಾದ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಇಂತಹ ಘಟನೆಗಳಿಂದ ಎಲೆಕ್ಟ್ರಿಕ್ ವಾಹನ ಸವಾರರಲ್ಲಿ ಆತಂಕ ಮನೆಮಾಡಿದ್ದು, ಒಂದು ಕಡೆಯಾದರೆ ಇಲೆಕ್ಟ್ರಿಕ್ ಸ್ಕೂಟರ್ ಕೊಳ್ಳಲು ಹಿಂದೆ ಮುಂದೆ ನೋಡ ಬೇಕಾದ ಪರಿಸ್ಥಿತಿ ಎದುರಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.