(www.vknews.in) : ಗುಲ್ಬರ್ಗ ವಿಶ್ವವಿದ್ಯಾನಿಲಯದಿಂದ ಪ್ರತಿಷ್ಠಿತ ಗೌರವ ಡಾಕ್ಟರೇಟ್ ಪಡೆದ ಯೆನೆಪೋಯ ಡೀಮ್ಡ್ ವಿಶ್ವವಿದ್ಯಾನಿಲಯದ ಕುಲಪತಿ ಹಾಜಿ ಯೆನೆಪೋಯ ಅಬ್ದುಲ್ಲಕುಂಞಿ ಯವರಿಗೆ ಸುಳ್ಯ ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪರವಾಗಿ ಮಂಗಳೂರಿನಲ್ಲಿ ಸನ್ಮಾನಿಸಲಾಯಿತು. ದ. ಕ ಜಿಲ್ಲೆಯ ಎಲ್ಲಾ ತಾಲೂಕುಗಳ ಮುಸ್ಲಿಂ ಸಮುದಾಯದ ಉಲಮಾ -ಉಮರಾ ನೇತಾರರ ಸೌಹಾರ್ದ ಸಂಗಮದಲ್ಲಿ ಈ ಗೌರವಾರ್ಪಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಣಚೂರು ಮೆಡಿಕಲ್ ಕಾಲೇಜು ಅಧ್ಯಕ್ಷ ಕಣಚೂರು ಮೋನು ಹಾಜಿ, ಮಾಜಿ ಸಚಿವ ವಿಪಕ್ಷ ಉಪನಾಯಕ ಯು. ಟಿ ಖಾದರ್, ಬ್ಯಾರಿಸ್ ಚೇಂಬರ್ ಆಫ್ ಕಾಮರ್ಸ್ ನ ಜಿಲ್ಲಾಧ್ಯಕ್ಷ ರಶೀದ್ ಹಾಜಿ ಎಸ್ ಎಂ ಆರ್, ಸುಳ್ಯ ಸುನ್ನಿ ಮಹಲ್ ಪೇಡೆರೇಶನ್ ಅಧ್ಯಕ್ಷ ಇಬ್ರಾಹಿಂ ಹಾಜಿ ಕತ್ತಾರ್, ಸುಳ್ಯ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಇಕ್ಫಾಲ್ ಎಲಿಮಲೆ, ಮಂಗಳೂರು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಮಾಜಿ ಮೇಯರ್ ಅಶ್ರಫ್, ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನಿಕಟಪೂರ್ವ ಸದಸ್ಯ ಕೆ ಎಂ ಮುಸ್ತಫಾ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.