ಇದಕ್ಕೂ ಮುನ್ನ ನೂಪುರ್ ಶರ್ಮಾ, ನವೀನ್ ಜಿಂದಾಲ್ ಸೇರಿದಂತೆ 9 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದ ದೆಹಲಿ ಪೊಲೀಸರು..
ನವದೆಹಲಿ (ವಿಶ್ವ ಕನ್ನಡಿಗ ನ್ಯೂಸ್) : ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷದ ಸಂದೇಶಗಳನ್ನು ಹರಡುವ ಪ್ರಕರಣದಲ್ಲಿ ದೆಹಲಿ ಪೊಲೀಸರು ಅಸಾದುದ್ದೀನ್ ಓವೈಸಿ ಮತ್ತು ಸ್ವಾಮಿ ಯತಿ ನರಸಿಂಗಾನಂದ್ ವಿರುದ್ಧ ಎಫ್ಐಆರ್ ದಾಖಲಿಸಿದೆ.
ಇದಕ್ಕೂ ಮುನ್ನ ದೆಹಲಿ ಪೊಲೀಸರು ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಸೇರಿದಂತೆ ಒಂಬತ್ತು ಜನರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಎಐಎಂಐಎಂ ಮುಖಂಡ ಅಸಾದುದ್ದೀನ್ ಓವೈಸಿ ಮತ್ತು ಸ್ವಾಮಿ ನರಸಿಂಗಾನಂದ್ ಸೇರಿದಂತೆ ಒಂಬತ್ತು ಜನರ ಮೇಲೆ ಸಾಮಾಜಿಕ ಮಾಧ್ಯಮಗಳ ಮೂಲಕ ಸಮಾಜದಲ್ಲಿ ದ್ವೇಷ ಸಂದೇಶಗಳನ್ನು ಹರಡುವುದು, ಸುಳ್ಳು ಮತ್ತು ದೃಢೀಕರಿಸದ ಸುದ್ದಿಗಳನ್ನು ಹರಡುವುದು, ಧಾರ್ಮಿಕ ಸಾಮರಸ್ಯವನ್ನು ಕದಡುವುದು ಸೇರಿದಂತೆ ಇತರ ಹಲವಾರು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.