ಕರಾಚಿ (ವಿಶ್ವ ಕನ್ನಡಿಗ ನ್ಯೂಸ್) : ರಾಜಕಾರಣಿ, ಜನಪ್ರಿಯ ಟಿವಿ ನಿರೂಪಕ ಅಮೀರ್ ಲಿಯಾಕತ್ (49) ಅವರು ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರು ಪಾಕಿಸ್ತಾನದ ಖುದಾದ್ ಕಾಲೋನಿಯಲ್ಲಿರುವ ತಮ್ಮ ಮನೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಲಿಯಾಖತ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದರಿಂದ ಪೊಲೀಸರು ಶವ ಪರೀಕ್ಷೆ ನಡೆಸಲು ಕುಟುಂಬದವರ ಅನುಮತಿ ಕೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.