ನಕಲಿ ಸುದ್ದಿಗಳಿಗೆ ಕಿವಿಗೊಡಬೇಡಿ, ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ – ಇಫ್ಜಾಲ್ ಸಿದ್ದಿಕ್
ದುಬೈ (ವಿಶ್ವ ಕನ್ನಡಿಗ ನ್ಯೂಸ್) : ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರಫ್ ಅವರ ಆರೋಗ್ಯವು ಹದಗೆಟ್ಟ ನಂತರ ಪ್ರಸ್ತುತ ದುಬೈನಲ್ಲಿರುವ ಅವರ ನಿವಾಸದಲ್ಲಿ ವೆಂಟಿಲೇಟರ್ ಬೆಂಬಲದಲ್ಲಿದೆ ಎಂದು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ಸದ್ಯ ವೈದ್ಯರು ಪರಿಸ್ಥಿತಿಯನ್ನು ಗಮನಿಸುತ್ತಿದ್ದಾರೆ. ಹಲವು ಅಂಗಗಳ ಅಸಮರ್ಪಕ ಕಾರ್ಯಗಳಿಂದ ಕಳೆದ ಮೂರು ವಾರಗಳಿಂದ ಮಾಜಿ ಅಧ್ಯಕ್ಷರು ಅಸ್ವಸ್ಥರಾಗಿದ್ದರು ಎಂದು ಮುಷರಫ್ ಅವರ ವಕ್ತಾರರು ಖಚಿತಪಡಿಸಿದ್ದಾರೆ.
ನಕಲಿ ಸುದ್ದಿಗಳು ಹರಿದಾಡುತ್ತಿದ್ದು, ಇದಕ್ಕೆ ಯಾರು ಕಿವಿಗೊಡಬೇಡಿ ಎಂದು ಆಲ್ ಪಾಕಿಸ್ತಾನ್ ಮುಸ್ಲಿಂ ಲೀಗ್ (ಎಪಿಎಂಎಲ್) ಅಧ್ಯಕ್ಷ ಇಫ್ಜಾಲ್ ಸಿದ್ದಿಕ್ ವಿನಂತಿಸಿದ್ದಾರೆ. ಜನರಲ್ ಪರ್ವೇಜ್ ಮುಷರಫ್ ಅವರು ಮನೆಯಲ್ಲಿದ್ದಾರೆ. ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿ ಎಂದು ಸಿದ್ದಿಕ್ ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.