ಘರ್ಷಣೆಯಲ್ಲಿ 11 ಪ್ರತಿಭಟನಾಕಾರರು ಮತ್ತು 12 ಪೊಲೀಸರು ಗಾಯಗೊಂಡಿದ್ದಾರೆ..
ರಾಂಚಿ (ವಿಶ್ವ ಕನ್ನಡಿಗ ನ್ಯೂಸ್) : ಬಿಜೆಪಿ ನಾಯಕರ ಧರ್ಮನಿಂದನೆ ಹೇಳಿಕೆಗಳ ವಿರುದ್ಧ ಪ್ರತಿಭಟಿಸುತ್ತಿದ್ದ ಜನರ ಗುಂಪಿನ ಮೇಲೆ ಪೊಲೀಸರು ಗುಂಡು ಹಾರಿಸಿದಾಗ ಇಬ್ಬರು ಸಾವನ್ನಪ್ಪಿದ್ದಾರೆ. ಪೋಲೀಸರ ಗುಂಡಿಗೆ ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರನ್ನು ಉಳಿಸಲು ಸಾಧ್ಯವಾಗಲಿಲ್ಲ. ಘರ್ಷಣೆಯಲ್ಲಿ ಕನಿಷ್ಠ 11 ಪ್ರತಿಭಟನಾಕಾರರು ಮತ್ತು 12 ಪೊಲೀಸರು ಗಾಯಗೊಂಡಿದ್ದಾರೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ರಾಂಚಿ ಮತ್ತು ಕೋಲ್ಕತಾದ ಹೌರಾದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ರಾಂಚಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ನಿನ್ನೆ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಅವಹೇಳನಕಾರಿ ಹೇಳಿಕೆಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆದವು. ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನಾಯಕರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದರು.
ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಮತ್ತು ಪಶ್ಚಿಮ ಬಂಗಾಳದಲ್ಲೂ ಪ್ರತಿಭಟನೆಗಳು ನಡೆದವು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.