ಬಂಟ್ವಾಳ (www.vknews.in) : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಲ್ಲಿ, ಯುವಜನತೆಯಲ್ಲಿ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಸಮಿತಿ ವತಿಯಿಂದ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿಯಲ್ಲಿ ಶಿಕ್ಷಣ ಅಧಿಕಾರಿಗಳು Think Green – Restore Ecosystem ಎಂಬ ಅಭಿಯಾನದ ಪೋಸ್ಟರ್ ಬಿಡುಗಡೆಗೊಳಿಸುವ ಮೂಲಕ ಚಾಲನೆ ನೀಡಲಾಯಿತು.
ಅಭಿಯಾನದಲ್ಲಿ ವಿಚಾರ ಸಂಕಿರಣ, ಗಿಡ ನೆಡುವುದು,ರೈತರೊಂದಿಗೆ ಸೆಲ್ಫಿ, ಜಾಗೃತಿ ಕಾರ್ಯಕ್ರಮಗಳು, ಸಾರ್ವಜನಿಕ ಸಂಪರ್ಕ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ. ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಬಂಟ್ವಾಳ ತಾಲೂಕು ಕಾರ್ಯದರ್ಶಿ ಹಫಾಜ್ , ಕೋಶಾಧಿಕಾರಿ ಶಾಹೀಮ್ ಹಾಗೂ ಸಮಿತಿ ಸದಸ್ಯ ಯಾಸೀನ್ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.