ಮುಂಬಯಿ (www.vknews.in) : ಅಂದೇರಿ ನಗರದ ಮುಖ್ಯ ರಸ್ತೆಗಳ ಪಕ್ಕದ ಚರಂಡಿಗಳ ಮೇಲೆ ತಳ್ಳುಗಾಡಿ ಮೂಲಕ ವ್ಯಾಪಾರ ಸೇರಿದಂತೆ ಅಂಗಡಿ ಮುಂಗಟ್ಟುಗಳ ಶೆಡ್ ಹಾಕಿ ವ್ಯಾಪಾರ ವಹಿವಾಟು ನಡೆಸುತ್ತಿರುವುದರಿಂದ ಜನ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆ ಆಗುತ್ತಿರುವುದನ್ನು ಪರಿಗಣಿಸಿ ಮುಂಬಯಿ ಮಹಾನಗರ ಪಾಲಿಕೆ ಗುರುವಾರ ತೆರವು ಕಾರ್ಯಾಚರಣೆ ನಡೆಸಿತ್ತು.
ದಿನ ಕಳೆದಂತೆ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದ್ದು, ಜನ ಸಂಚಾರಕ್ಕ ತೊಂದರೆ ಆಗುತ್ತಿರುವುದರಿಂದ ಹಲವಾರು ಸಮಸ್ಯೆಗೆ ಕಾರಣವಾಗುತ್ತಿದೆ ಎಂದು ರಸ್ತೆ ಆಕ್ರಮಿಸಿ ಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿರುವ ಬೀದಿ ಬದಿ ವ್ಯಾಪಾರಸ್ತರಿಗೆ ಅಧಿಕಾರಿಗಳು ಖಡಕ್ ವಾರ್ನಿಂಗ್ ಕೊಟ್ಟು, ಅಂಗಡಿ ಮುಂಗಟ್ಟುಗಳನ್ನು ತೆರವುಗೊಳಿಸಲಾಯಿತು.
ಬೀದಿ ಬದಿ ವ್ಯಾಪಾರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿ ಕೊಡಬೇಕೆಂದು ಈ ಸಂದರ್ಭದಲ್ಲಿ ಅಧಿಕಾರಿಗಳಿಗೆ ಮನವಿ ಮಾಡಲಾಯಿತು.
ವರದಿ : ಮುಹಮ್ಮದ್ ಉಳ್ಳಾಲ್ ಮುಂಬಯಿ ಅಂದೇರಿಯಿಂದ…
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.